ಅತ್ಯಂತ ಕೆಟ್ಟ ದಾಖಲೆಗೆ ಕೊರಳೊಡ್ಡಿದ ರಾಹುಲ್..!
ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲು ಕಂಡಿದೆ.
ಕೇಪ್‌ಟೌನ್‌ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಟೀಂ ಇಂಡಿಯಾ ನಾಲ್ಕು ರನ್‌ಗಳಿಂದ ಸೋಲು ಕಂಡಿದೆ. kl-rahul-became-1st captain saaksha tv
ಆ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆತಿಥೇಯರು 3-0 ಅಂತರದಿಂದ ವಶಪಡಿಸಿಕೊಂಡಿದ್ದಾರೆ.
ಈ ಸರಣಿಯಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿದ್ದ ಕೆ.ಎಲ್.ರಾಹುಲ್, ಭಾರತದ ಪರ ಅತ್ಯಂತ ಕೆಟ್ಟ ದಾಖಲೆಗೆ ಕಾರಣವಾಗಿದ್ದಾರೆ.

ಟೀಂ ಇಂಡಿಯಾ ನಿಯಮಿತ ನಾಯಕ ರೋಹಿತ್ ಶರ್ಮಾ ಗಾಯದ ಸಮಸ್ಯೆಯಿಂದ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗುಳಿದಿದ್ದರು.
ರೋಹಿತ್ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವ ವಹಿಸಿದ್ದ ಕೆಎಲ್ ರಾಹುಲ್ ಇದುವರೆಗಿನ ಅತ್ಯಂತ ಕೆಟ್ಟ ದಾಖಲೆ ಬರೆದಿದ್ದಾರೆ.
ನಾಯಕನಾಗಿ ಮೊದಲ ಮೂರು ಏಕದಿನ ಪಂದ್ಯಗಳಲ್ಲಿ ಸೋತ ಮೊದಲ ಭಾರತೀಯ ನಾಯಕ ಎಂಬ ಬೇಡವಾದ ದಾಖಲೆ ಬರೆದಿದ್ದಾರೆ ರಾಹುಲ್. kl-rahul-became-1st captain saaksha tv
ಇಲ್ಲಿಯವರೆಗೆ, ಯಾವುದೇ ಭಾರತೀಯ ನಾಯಕ ತಮ್ಮ ಮೊದಲ ಮೂರು ಏಕದಿನ ಪಂದ್ಯಗಳಲ್ಲಿ ಸೋತಿಲ್ಲ.