ಟೀಂ ಇಂಡಿಯಾಗೆ ಕೆ.ಎಲ್.ರಾಹುಲ್ kl rahul saaksha tv ಸಾರಥಿ
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದೆ. ಕನ್ನಡಿಗ ಕೆ.ಎಲ್ ರಾಹುಲ್ ಗೆ ಅದೃಷ್ಠ ಖುಲಾಯಿಸಿದ್ದು, ಆಫ್ರಿಕಾ ನೆಲದಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.
ಸೀಮಿತ ಓವರ್ ಗಳ ನಾಯಕ ರೋಹಿತ್ ಶರ್ಮಾ, ಫಿಟ್ನೆನ್ಸ್ ಕೊರತೆಯಿಂದ ಸರಣಿಯಿಂದ ದೂರ ಉಳಿದಿದ್ದಾರೆ.
ಹೀಗಾಗಿ ಅವರ ಬದಲಿಗೆ ಕೆ.ಎಲ್.ರಾಹುಲ್ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
ಬಿಸಿಸಿಐ ಪ್ರಕಟಿಸಿದ 18 ಸದಸ್ಯರ ತಂಡದಲ್ಲಿ ಐಪಿಎಲ್ 2021 ರ ದೇಶೀಯ ತಾರೆಗಳಾದ ವೆಂಕಟೇಶ್ ಅಯ್ಯರ್, ರುತುರಾಜ್ ಗಾಯಕ್ವಾಡ್ ಮತ್ತು ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಸೇರಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಭಾರತ ಏಕದಿನ ತಂಡಯನ್ನು ಕೆ ಎಲ್ ರಾಹುಲ್ ಮುನ್ನಡೆಸಲಿದ್ದಾರೆ.
ಆರಂಭಿಕರಾಗಿ ಶಿಖರ್ ಧವನ್, ದೇಶಿ ಕ್ರಿಕೆಟ್ ನ ಹೀರೋ ರುತುರಾಜ್ ಗಾಯಕ್ವಾಡ್ ಸ್ಥಾನ ಪಡೆದಿದ್ದಾರೆ.
ಇನ್ನು ಏಕದಿನ ನಾಯಕತ್ವ ಕಳೆದುಕೊಂಡ ಬಳಿಕ ವಿರಾಟ್ ಕೊಹ್ಲಿ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.
ಮಿಡಲ್ ಆರ್ಡರ್ ಬ್ಯಾಟರ್ ಗಳಾಗಿ ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್ ಸ್ಥಾನ ಪಡೆದಿದ್ದಾರೆ.
ವಿಕೆಟ್ ಕೀಪರ್ ಗಳ ಕೋಟಾದಲ್ಲಿ ರಿಷಬ್ ಪಂತ್, ಇಶಾಂತ್ ಕಿಶನ್ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಸ್ಪಿನ್ನರ್ ಗಳ ವಿಭಾಗದಲ್ಲಿ ಯಜುವೇಂದ್ರ ಚಹಾಲ್, ರವಿಚಂದ್ರನ್ ಅಶ್ವಿನ್, ವಾಷಿಂಗ್ ಟನ್ ಸುಂದರ್ ಕಾಣಿಸಿಕೊಂಡಿದ್ದಾರೆ.
ಯಾರ್ಕರ್ ಕಿಂಗ್ ಜಸ್ಪ್ರಿತ್ ಬುಮ್ರಾ ಅವರಿಗೆ ಉಪನಾಯಕನ ಪಟ್ಟ ಸಿಕ್ಕಿದೆ. ಇನ್ನುಳಿದಂತೆ ಭುವನೇಶ್ವರ್ ಕುಮಾರ್, ದೀಪಕ್ ಚಹಾರ್,ಪ್ರಸಿದ್ಧ್ ಕೃಷ್ಣ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಇನ್ನು ದಕ್ಷಿಣ ಆಫ್ರಿಕಾ ಮತ್ತು ಟೀಂ ಇಂಡಿಯಾ ನಡುವಿನ ಏಕದಿನ ಸರಣಿ ಜನವರಿ 19ರಿಂದ ಆರಂಭವಾಗಲಿದೆ.