ಟೆಸ್ಟ್ ಸರಣಿಯಿಂದ ಕೆ.ಎಲ್.ರಾಹುಲ್ ಔಟ್.. ಯಾದವ್ ಇನ್ KL Rahul saaksha tv
ಕಾನ್ಪುರ್ : ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಕನ್ನಡಿಗ ಕೆ.ಎಲ್.ರಾಹುಲ್ ಔಟ್ ಆಗಿದ್ದಾರೆ.
ಅವರ ಬದಲಾಗಿ ಸೂರ್ಯಕುಮಾರ್ ಯಾದವ್ ಅವರು ತಂಡ ಸೇರಿಕೊಳ್ಳಲಿದ್ದಾರೆ.
ರಾಹುಲ್ ಅವರು ಎಡಗಾಲಿನ ಸ್ನಾಯು ಸೆಳೆತಕ್ಕೆ ಒಳಗಾಗಿದ್ದಾರೆ.
ಹೀಗಾಗಿ ನ್ಯೂಜಿಲೆಂಡ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ.
ರಾಹುಲ್ ಸರಣಿಯಿಂದ ಔಟ್ ಆಗಿರುವ ಹಿನ್ನೆಲೆಯಲ್ಲಿ ಕನ್ನಡಿಗ ಮಯಾಂಕ್ ಅಗರ್ ವಾಲ್ ಜೊತೆಗೆ ಶುಬ್ ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆಗಳಿವೆ.
ರಾಹುಲ್ 40 ಟೆಸ್ಟ್ ಪಂದ್ಯಗಳಲ್ಲಿ 35.16 ಸರಾಸರಿಯಲ್ಲಿ 2,321 ರನ್ ಗಳಿಸಿದ್ದಾರೆ.









