ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ರಾಜೀವ್ ಗಾಂಧಿ ಹೆಸರು ಸೂಕ್ತವಲ್ಲ
ಮೈಸೂರು : ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ರಾಜೀವ್ ಗಾಂಧಿ ಹೆಸರು ಸೂಕ್ತವಲ್ಲ ಎಂದು ಸಂಸದ ಪ್ರತಾಪ ಸಿಂಹ ಅಭಿಪ್ರಾಯಪಟ್ಟಿದ್ದಾರೆ.
ನಾಗರಹೊಳೆ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನದ ಮರುನಾಮಕರಣಕ್ಕೆ ಸಂಬಂಧಿಸಿದಂತೆ ಪ್ರತಾಪ್ ಸಿಂಹ ಇವತ್ತು, ಸಚಿವ ಉಮೇಶ್ ಕತ್ತಿ ಅವರನ್ನು ಭೇಟಿಯಾಗಿ ಉದ್ಯಾವನಕ್ಕೆ ಫಿಲ್ಡ್ ಮಾರ್ಷಲ್ ಕಾರ್ಯಪ್ಪನವರ ಹೆಸರಿಡಿ ಎಂದು ಪತ್ರದ ಮೂಖೇನ ಮನವಿ ಮಾಡಿಕೊಂಡಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾನತಾಡಿದ ಅವರು, ಉದ್ಯಾನವನ ಮೈಸೂರು ಕೊಡಗು ಭಾಗಕ್ಕೆ ಸೇರಿದೆ. ಈ ಬಗ್ಗೆ ಈಗಾಗಲೇ ಆನ್ ಲೈನ್ ಕ್ಯಾಂಪೇನ್ ಆರಂಭವಾಗಿದ್ದು, ಕೊಡಗಿನ ಜನಸಂಖ್ಯೆ ಬಹಳ ಕಡಮೆ ಇದ್ದರು.
ಅದರಲ್ಲಿ ಬಹುತೇಕರು ಭಾರತೀಯ ಸೇನೆಯ ಸೇವೆಯಲ್ಲಿದ್ದಾರೆ. ಅವರಿಗೆ ಗೌರವ ಸಮರ್ಪಿಸಲು ಉದ್ಯಾನವನಕ್ಕೆ ಕಾರ್ಯಪ್ಪ ಅವರ ಹೆಸರು ಬಹಳ ಸೂಕ್ತ. ಅವರ ನಿಸ್ವಾರ್ಥ ಸೇವೆಗೆ ಗೌರವ ಕೊಡುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದಿದ್ದಾರೆ.
ಅಲ್ಲದೆ ದೇಶದ ಹಲವು ಭಾಗದ ರಾಷ್ಟ್ರೀಯ ಉದ್ಯಾನವನಗಳಿಗೆ ನೆಹರು, ಗಾಂಧಿ ಕುಟುಂಬದ ಹೆಸರಿದೆ. ಇದರಿಂದ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ರಾಜೀವ್ ಗಾಂಧಿ ಹೆಸರು ಸೂಕ್ತವಲ್ಲ ಎಂದು ಅಭಿಪ್ರಾಟ್ಟಿದ್ದಾರೆ.