ಕೊಡಗು | ಒಂದೇ ಗ್ರಾಮದಲ್ಲಿ 51 ಮಂದಿಗೆ ಕೊರೊನಾ corona saaksha tv
ಮಡಿಕೇರಿ : ಕೊಡಗು ಜಿಲ್ಲೆಯ ಗ್ರಾಮವೊಂದರಲ್ಲಿ 51 ಮಂದಿಗೆ ಕೊರೊನಾ ಸೋಂಕಿರುವುದು ಪತ್ತೆಯಾಗಿದ್ದು, ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿದೆ.
ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಅಂಜನಗೇರಿ ಗ್ರಾಮದಲ್ಲಿ 25 ಕ್ಕೂ ಹೆಚ್ಚು ಕುಟುಂಬಗಳ 51 ಜನರಿಗೆ ಹೆಮ್ಮಾರಿ ಸೋಂಕು ತಗುಲಿರೋದು ದೃಢಪಟ್ಟಿದೆ.
ಬೆಟ್ಟಗೇರಿ ಕಾಫಿ ಎಸ್ಟೇಟ್ ನಲ್ಲಿರುವ ಬಿಜನಮೊಟ್ಟೆ ಬ್ರಾಂಚಿನಲ್ಲಿರುವ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ಹರಡಿತ್ತು.
ಈ ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅಂಜನಗೇರಿಯ 300 ಕ್ಕೂ ಹೆಚ್ಚು ಜನರಿಗೆ ಕೋವಿಡ್ ಪರೀಕ್ಷೆ ಮಾಡಿದ್ದಾರೆ.
ಈ ವೇಳೆ 51 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಗ್ರಾಮವನ್ನೇ ಸೀಲ್ ಡೌನ್ ಮಾಡಲಾಗಿದೆ.