Kodagu | ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿ
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ
ಕಾವೇರಿ ನದಿ ನೀರಿನ ಮಟ್ಟ ಗಣನೀಯ ಏರಿಕೆ
ನಾಪೋಕ್ಲು ರಸ್ತೆ ಮೇಲೆ ಹರಿಯುತ್ತಿರುವ ನೀರು
ಭಾರಿ ಮಳೆಗೆ ಹಾರಂಗಿ ಜಲಾಶಯ ಭರ್ತಿ
ಮಡಿಕೇರಿ: ಕೊಡಗು ಜಿಲ್ಲೆಯ ಬಹುಭಾಗದಲ್ಲಿ ಭಾರೀ ಮಳೆಯಾಗುತ್ತಿದೆ.
ಪರಿಣಾಮ ಭಾಗಮಂಡಲದಲ್ಲಿರುವ ತ್ರಿವೇಣಿ ಸಂಗಮ ಸಂಪೂರ್ಣವಾಗಿ ಭರ್ತಿಯಾಗಿದೆ.
ಕಳೆದ ಕೆಲವು ದಿನಗಳಿಂದ ಬ್ರಹ್ಮಗಿರಿ ಬೆಟ್ಟ ಭಾಗದಲ್ಲಿ ಭರ್ಜರಿ ಮಳೆಯಾಗುತ್ತಿದೆ.

ಇದರಿಂದಾಗಿ ಕಾವೇರಿ ನದಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ.
ಹೀಗಾಗಿ ಸಂಗಮ ಸಂಪೂರ್ಣವಾಗಿ ಭರ್ತಿಯಾಗಿ ನಾಪೋಕ್ಲು ರಸ್ತೆ ಮೇಲೆ ನೀರು ಹರಿಯುತ್ತಿದೆ.
ಜಿಲ್ಲೆಯಲ್ಲಿ ಇನ್ನಷ್ಟ ದಿನ ಮಳೆ ಮುಂದುವರಿಯುವ ಸಾಧ್ಯತೆಗಳಿದ್ದು, ನೀರಿನ ಮಟ್ಟ ಮತ್ತಷ್ಟು ಹೆಚ್ಚಾಗಬಹುದು.
ರಸ್ತೆ ಮೇಲೆ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ ನಾಪೋಕ್ಲು ಭಾಗಮಂಡಲ ರಸ್ತೆ ಸಂಪರ್ಕ ಕಡಿತವಾಗುವ ಸಾಧ್ಯತೆಯಿದೆ.