ಕೊಡಗು : ಕಾರು ಪಲ್ಟಿ.. ಮೂವರಿಗೆ ಗಾಯ
ಕೊಡಗು : ಚಾಲಕನ ನಿಯಂತ್ರಣ ತಪ್ಪಿ ಕಾರು ಒಂದು ಪಲ್ಟಿಯಾಗಿರುವ ಘಟನೆ ಸೋಮವಾರಪೇಟೆ ಬಳಿ ಕುಂಬೂರಿನಲ್ಲಿ ನಡೆದಿದೆ.
ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಜರುಗಿಲ್ಲವಾದ್ರೂ ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಸೋಮವಾರಪೇಟೆ ಕಡೆಯಿಂದ ಮಡಿಕೇರಿ ರಸ್ತೆಯಲ್ಲಿ ಆಗಮಿಸುತ್ತಿದ್ದಾಗ ಅಪಘಾತ ಸಂಭವಿಸಿದೆ.
ಕಾರು ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಅವರನ್ನು ಸ್ಥಳೀಯರು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ನಂದವಂಶ ನಿರ್ಣಾಮ ಮಾಡಿದ ಮಹಾನ್ ಜ್ಞಾನಿ ಚಾಣಕ್ಯನ ಜೀವನಕಥೆ..!
ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಆಗಮಿಸುತ್ತಿದ್ದು, ಪರಿಶೀಲನೆ ನಡೆಸಿದ್ದಾರೆ.










