ಕೊಡಗು : ದಿನೇ ದಿನೇ ಮಂಜಿನ ನಾಡು ಎಂದೇ ಕರೆಸಿಕೊಳ್ಳುವ ಕೊಡುಗು ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಲೇ ಇದೆ. ಇಂದು ಕೂಡ ಜಿಲ್ಲೆಯಲ್ಲಿ ಕೊರೊನಾ ಸ್ಪೋಟವಾಗಿದ್ದು, ಹೊಸದಾಗಿ 39 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 1289 ಆಗಿದ್ದು, 1020 ಮಂದಿ ಗುಣಮುಖರಾಗಿದ್ದಾರೆ. 252 ಸಕ್ರಿಯ ಪ್ರಕರಣಗಳಿದ್ದು, 17 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 216 ಆಗಿದೆ.