ಕೊಡಗು ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ : ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು
ಕರ್ತವ್ಯ ಸ್ಥಳ : ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಕೊಡಗು ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 10 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳ ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.
ವಯಸ್ಸಿನ ಮೀತಿ : ದಿನಾಂಕ 13/02/2025ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 18,606.12 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಶೈಕ್ಷಣಿಕ ಅರ್ಹತೆಯಲ್ಲಿನ ಮೆರಿಟ್ ಮತ್ತು ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಶುಲ್ಕ ಪಾವತಿಸುವ ವಿಧಾನ : ಮುಖ್ಯ ಲೆಕ್ಕಾಧಿಕಾರಿ, ಜಿಲ್ಲಾ ಪಂಚಾಯತ್, ಕೊಡಗು ಇವರ ಬ್ಯಾಂಕ್ ಖಾತೆ ಸಂಖ್ಯೆಗೆ ಅಥವಾ QR Code ಸ್ಕ್ಯಾನ್ ಮಾಡಿ ಶುಲ್ಕ ಪಾವತಿಸಬೇಕು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 27, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರುವರಿ 13, 2025
Website:https://sevasindhuservices.karnataka.gov.in/renderApplicationForm.do;jsessionid=716CD4AF3D3DC7E5D9DE624E68BF1120?serviceId=20250015&UUID=9bb90099-6df7-46f1-8631-c50e1a5a348c&directService=true&tempId=8500&serviceNameToDisplay=Recruitment+for+Library+Supervisors+in+Zilla+Panchayat&grievDefined=0&serviceLinkRequired=No&userLoggedIn=N&source=CTZN&OWASP_CSRFTOKEN=JFNR-MM4T-5O2G-N1I8-YITS-W8BF-XZR1-ZCXW








