Kodagu Rain | ಕೊಡಗು ಮಳೆಹಾನಿ ಪ್ರದೇಶಗಳಿಗೆ ಸಿಎಂ ಭೇಟಿ
ಕೊಡಗು : ಕಳೆದ 12 ದಿನಗಳಿಂದ ಕೊಡಗು ಜಿಲ್ಲೆಯಾದ್ಯಂತೆ ಭಾರಿ ಮಳೆಯಾಗುತ್ತಿದೆ.
ಧಾರಕಾರ ಮಳೆಗೆ ಜಿಲ್ಲೆಯಲ್ಲಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದ್ದು, ಹಲವರು ಮನೆ ಕಳೆದುಕೊಂಡಿದ್ದಾರೆ.
ಇಂದು ಕೊಡಗಿನಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದರು.

ಈ ವೇಳೆ ಧಾರಾಕಾರವಾಗಿ ಸುರಿದ ಮಳೆಗೆ ಮನೆ ಕಳೆದುಕೊಂಡ ಮಡಿಕೇರಿಯ ಮಲ್ಲಿಕಾರ್ಜುನ ನಗರದ ಗೋಪಾಲ ಅವರ ಮನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೀಕ್ಷಿಸಿದರು.
ಬಳಿಕ ಗೋಪಾಲ ಕುಟುಂಬದವರಿಗೆ 95,100 ರೂ ಚೆಕ್ ವಿತರಿಸಿದರು.
ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಕಂದಾಯ ಸಚಿವರಾದ ಆರ್.ಅಶೋಕ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸಂಸದರಾದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಇತರರು ಇದ್ದರು.