ರೈತ ಸಂಘದ ರಾಜ್ಯಾಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ವಜಾ….
ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾ ಮಾಡಲಾಗಿದೆ. ಶಿವಮೊಗ್ಗದಲ್ಲಿ ನಡೆದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತುರ್ತು ರಾಜ್ಯ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ರಾಜ್ಯದ 20 ಕ್ಕೂ ಹೆಚ್ಚು ಜಿಲ್ಲೆಗಳಿಂದ ಆಗಮಿಸಿದ ರೈತ ಸಂಘಟನೆಯ ಪ್ರತಿನಿಧಿಗಳು ಸಭೆಯಲ್ಲಿ ಒಕ್ಕೊರಲಿನಿಂದ ಕೈ ಎತ್ತುವ ಮೂಲಕ ಕೋಡಿಹಳ್ಳಿ ಚಂದ್ರಶೇಖರ ಉಚ್ಚಾಟನೆಗೆ ಒಪ್ಪಿಗೆ ಸೂಚಿಸಿದ್ದಾರೆ. ನೂತನ ರಾಜ್ಯಾಧ್ಯಕ್ಷರನ್ನಾಗಿ ಹೆಚ್ ಆರ್ ಬಸವರಾಜಪ್ಪ ಅವರನ್ನ ಆಯ್ಕೆ ಮಾಡಲಾಗಿದೆ.
ಇತ್ತೀಚೆಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಖಾಸಗಿ ಸುದ್ದಿ ವಾಹಿನಿಯಲ್ಲಿ ಪ್ರಸಾರವಾದ ಕಾರ್ಯಕ್ರಮದಲ್ಲಿ ಅವರು ”ದಿಲ್ಲಿಯ ಐತಿಹಾಸಿಕ ರೈತ ಹೋರಾಟ”ವನ್ನು ಮೊಟಕುಗೊಳಿಸಲು ಡೀಲು ಕುದುರಿಸುವ ಮಾತುಗಳನ್ನಾಡಿರುವ ವಿಡಿಯೋ ಹೊರಬಂದಿತ್ತು. ಈ ಸುದ್ದಿ ರಾಜ್ಯ ರಾಷ್ಟ್ರದಾದ್ಯಂತ ರೈತ ಮುಖಂಡರನ್ನು ಕಂಗೆಡಿಸಿದೆ.








