ಕೋಲಾರ: ಕೋಡಿಮಠದ ಶ್ರೀ ಮತ್ತೊಮ್ಮೆ ಭಯಾನಕ ಭವಿಷ್ಯ ನುಡಿದಿದ್ದು, ಈ ಬಾರಿ ಮತಾಂಧತೆ ಹೆಚ್ಚಾಗಲಿದ್ದು, ಧಾರ್ಮಿಕ ಮುಖಂಡರೊಬ್ಬರ ಸಾವಾಗಲಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಕೋಲಾರ ತಾಲೂಕಿನ ನರಸಾಪುರದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಬಾರಿ ಜಾಗತಿಕ ಮಟ್ಟದಲ್ಲಿ ತೊಂದರೆಯಾಗಲಿದ್ದು, ಬೆಂಕಿ, ನೀರಿನ ಹಾವಳಿ, ಯುದ್ಧ ನಡೆಯುತ್ತದೆ. ಅನೇಕ ಸಾವು- ನೋವುಗಳು ಸಂಭವಿಸುತ್ತದೆ. ಬಾಂಬ್ ಸ್ಫೋಟ, ಭೂಕಂಪ ಆಗಲಿದೆ. ಯುಗಾದಿ ನಂತರ ರಾಜ್ಯದಲ್ಲಿ ಒಳ್ಳೆಯ ಮಳೆ, ಬೆಳೆ ಆಗುವ ಲಕ್ಷಣಗಳಿವೆ ಎಂದು ಹೇಳಿದ್ದಾರೆ.