ADVERTISEMENT
Saturday, April 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಬೆಂಗಳೂರು

ಕೊಗೀಲು ಅಕ್ರಮ ಮನೆಗಳ ತೆರವು ಪ್ರಕರಣ; 262 ಅರ್ಜಿಗಳ ಪೈಕಿ, 37 ಮಂದಿ ಮಾತ್ರ ಮನೆ ಪಡೆಯಲು ಅರ್ಹರು!

Kogilu illegal house eviction case; Out of 262 applications, only 37 people are eligible to get houses!

Shwetha by Shwetha
January 7, 2026
in ಬೆಂಗಳೂರು, Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು ನಗರದ ಯಲಹಂಕ ಸಮೀಪದ ಕೋಗಿಲು (Kogilu) ಅಕ್ರಮ ನಿವಾಸಿಗಳ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಪುನರ್ವಸತಿ ಪ್ರಕ್ರಿಯೆ ಈಗ ಅಂತಿಮ ಹಂತಕ್ಕೆ ತಲುಪಿದೆ. ಮನೆ ಕಳೆದುಕೊಂಡವರ ಪೈಕಿ ಹೊಸ ಮನೆ ಪಡೆಯಲು ಸಲ್ಲಿಕೆಯಾಗಿದ್ದ 262 ಅರ್ಜಿಗಳ ಪೈಕಿ ಕೇವಲ 37 ಮಂದಿ ಮಾತ್ರ ಅರ್ಹರಾಗಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಲಭ್ಯವಾಗಿದೆ.

ದಾಖಲೆಗಳ ಕೂಲಂಕಷ ಪರಿಶೀಲನೆ

Related posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

April 3, 2026
ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

April 3, 2026

ರಾಜೀವ್ ಗಾಂಧಿ ವಸತಿ ನಿಗಮದ (Rajiv Gandhi Housing Corporation) ಕಠಿಣ ಷರತ್ತುಗಳ ಅನ್ವಯ ಅಧಿಕಾರಿಗಳು ಅಂತಿಮ ಹಂತದ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಒಟ್ಟು 262 ಮಂದಿ ಪುನರ್ವಸತಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಅಧಿಕಾರಿಗಳು ನಡೆಸಿದ ಸರ್ವೇಯ ನಂತರ ಕೇವಲ 35 ರಿಂದ 40 ಜನರ ದಾಖಲೆಗಳು ಮಾತ್ರ ಸರಿಯಾಗಿರುವುದು ಕಂಡುಬಂದಿದೆ. ಈ ಪೈಕಿ ಬೆಂಗಳೂರಿನಲ್ಲಿ ದೀರ್ಘಕಾಲದಿಂದ ವಾಸವಿರುವ 37 ಮಂದಿಯನ್ನು ಮಾತ್ರ ಮನೆ ಪಡೆಯಲು ಅರ್ಹರು ಎಂದು ಗುರುತಿಸಲಾಗಿದೆ.

ವಸತಿ ಸಚಿವರಿಗೆ ಮಾಹಿತಿ

ಈ ಕುರಿತಾದ ಸಂಪೂರ್ಣ ಮಾಹಿತಿಯನ್ನು ಜಿಬಿಎ (GBA) ಅಧಿಕಾರಿಗಳು ಸಚಿವ ಕೃಷ್ಣಬೈರೇಗೌಡ (Krishna Byre Gowda) ಹಾಗೂ ಸಚಿವ ಜಮೀರ್ ಅಹ್ಮದ್ (Zameer Ahmed) ಅವರಿಗೆ ನೀಡಿದ್ದಾರೆ. ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿರುವ ಅಂಕಿಅಂಶಗಳ ಪ್ರಕಾರ, ತೆರವುಗೊಳಿಸಲಾದ ಮನೆಗಳ ಸಂಖ್ಯೆ 83 ಆಗಿದ್ದರೂ, 119 ಮನೆಗಳ ಸರ್ವೇ ನಡೆಸಲಾಗಿತ್ತು. ಇದರಲ್ಲಿ 118 ಮಂದಿ ಆಧಾರ್ ಕಾರ್ಡ್ ಹೊಂದಿದ್ದರೆ, ಕೇವಲ 77 ಕುಟುಂಬಗಳ ಬಳಿ ರೇಷನ್ ಕಾರ್ಡ್ (Ration Card) ಇದೆ. ಆದಾಯ ಪ್ರಮಾಣ ಪತ್ರ (Income Certificate) ಕೇವಲ 63 ಕುಟುಂಬಗಳ ಬಳಿ ಮಾತ್ರ ಇರುವುದು ಪತ್ತೆಯಾಗಿದೆ.

ಅರ್ಹತೆಗೆ ಮಾನದಂಡವೇನು? ಅರ್ಹ ಫಲಾನುಭವಿಗಳನ್ನು ಗುರುತಿಸಲು ಅಧಿಕಾರಿಗಳು ಹಲವು ಕಠಿಣ ಕ್ರಮಗಳನ್ನು ಅನುಸರಿಸುತ್ತಿದ್ದಾರೆ.

ಕಳೆದ 5 ವರ್ಷಗಳ ದಾಖಲಾತಿ (Documents of last 5 years) ಕಡ್ಡಾಯವಾಗಿರಬೇಕು.
ಬೆಸ್ಕಾಂ (BESCOM) ಅಧಿಕಾರಿಗಳಿಂದ ವಿದ್ಯುತ್ ಸಂಪರ್ಕದ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ.
ಕಳೆದ ಚುನಾವಣೆಯ ಮತದಾನದ ಪಟ್ಟಿ (Voter List) ಪರಿಶೀಲಿಸಿ, ಅವರು ಇಲ್ಲಿಯೇ ವೋಟ್ ಹಾಕಿದ್ದಾರೆಯೇ ಎಂದು ತನಿಖೆ ನಡೆಸಲಾಗುತ್ತಿದೆ.
ಆಧಾರ್ ಮತ್ತು ವೋಟರ್ ಐಡಿ ವಿತರಣೆಯಾದ ಸಮಯವನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ.
ರೇಷನ್ ಕಾರ್ಡ್ ಪಡೆದುಕೊಂಡಿದ್ದರ ಬಗ್ಗೆ ತನಿಖೆ

ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳ ದಾಖಲಾತಿ ಪರಿಶೀಲನೆ ಕಾರ್ಯಕ್ಕೆ ಚುರುಕು ನೀಡಲಾಗಿದೆ. ಪಟ್ಟಿ ಫೈನಲ್ ಮಾಡಲು ಸರ್ಕಸ್ ಮಾಡಲಾಗುತ್ತಿದೆ. ಕಳೆದ ಚುನಾವಣೆಯ ಮತದಾನದ ಪಟ್ಟಿ ಪರಿಶೀಲನೆ ಮಾಡಲಾಗುತ್ತಿದೆ. ಇಲ್ಲಿರುವ ಜನರು ವೋಟ್ ಹಾಕಿದ್ದಾರಾ ಅನ್ನೋದರ ಪರಿಶೀಲನೆಯನ್ನೂ ಮಾಡಲಾಗುತ್ತಿದೆ. ಜೊತೆಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ‌ಂ) ಅಧಿಕಾರಿಗಳಿಂದ ಕರೆಂಟ್ ಕನೆಕ್ಷನ್ ಹೇಗೆ ಪಡೆದುಕೊಮಡಿದ್ದಾರೆ ಎಂಬುದರ ಬಗ್ಗೆ ತನಿಖೆ ಮಾಡಲಾಗುತ್ತಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಸರ್ಕಾರದಿಂದ ರೇಷನ್ ಕಾರ್ಡ್ ವಿತರಣೆ ಮಾಡಿಲ್ಲ. ಆದರೂ, ಇವರು ಯಾವಾಗ ರೇಷನ್ ಕಾರ್ಡ್ ಮಾಡಿಸಿಕೊಂಡಿದ್ದಾರೆ, ಇದಕ್ಕೆ ಏನೆಲ್ಲಾ ಆಧಾರಗಳನ್ನು ಒದಗಿಸಿದ್ದಾರೆ ಎಂಬ ಮಾಹಿತಿ ಕಲೆಹಾಕಲಾಗಿದೆ.

5 ವರ್ಷಗಳ ದಾಖಲೆ ಇದ್ದವರಿಗೆ ಮಾತ್ರ ಮನೆ

ಕೋಗಿಲು ಬಡಾವಣೆಯಲ್ಲಿ ಅಕ್ರಮ ನಿವಾಸಿಗಳ ಬಳಿ ಕಳೆದ 5 ವರ್ಷದ ಡಾಕ್ಯುಮೆಂಟ್ ಇದೆಯಾ ಅನ್ನೋದರ ಪರಿಶೀಲನೆ ಕಾರ್ಯವನ್ನು ಮಾಡಲಾಗಿದೆ. ಇದರಲ್ಲಿ ಆಧಾರ್ ಕಾರ್ಡ್, ವೋಟರ್ ಐಡಿ ಯಾವಾಗ ವಿತರಣೆಯಾಗಿದ್ದು ಅನ್ನೋದರ ತನಿಖೆ ಹೆಚ್ಚು ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಒಟ್ಟಾರೆಯಾಗಿ 5 ವರ್ಷಗಳ ದಾಖಲಾತಿ ಇದ್ದವರಿಗೆ ಮಾತ್ರ ರಾಜೀವ್ ಗಾಂಧಿ ವಸತಿ ನಿಗಮದಡಿ ನಿರ್ಮಿಸಲಾದ ಮನೆಯನ್ನು ನೀಡುವುದಕ್ಕೆ ಸರ್ಕಾರ ನಿರ್ಧಾರ ಮಾಡಿದೆ ಎಂಬುದು ಹೊರಬಿದ್ದಿದೆ.

ShareTweetSendShare
Join us on:

Related Posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

by Shwetha
April 3, 2026
0

ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

by Shwetha
April 3, 2026
0

ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಸದ್ಯ ತಮ್ಮ ತಾಯಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಆದರೆ, ಈ ಸೂತಕದ ಮನೆಯಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಟೀಕೆಗಳನ್ನು ಮಾಡುತ್ತಿರುವುದು ವಿವಾದಕ್ಕೆ...

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

by Shwetha
April 3, 2026
0

ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಮತ್ತೊಮ್ಮೆ ತೀವ್ರ ಮುಖಭಂಗವಾಗಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಉದ್ವಿಗ್ನತೆಯ ನಡುವೆ ಶಾಂತಿ ದಲ್ಲಾಳಿಯಂತೆ ವರ್ತಿಸಲು ಮುಂದಾದ ಪಾಕಿಸ್ತಾನಕ್ಕೆ ಪಶ್ಚಿಮ ಏಷ್ಯಾದ ಪ್ರಬಲ ರಾಷ್ಟ್ರ...

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

by Shwetha
April 3, 2026
0

ರಾಜ್ಯದಲ್ಲಿ ಸೈಬರ್ ಅಪರಾಧ ಸೇರಿದಂತೆ ಹಲವು ರೀತಿಯ ಅಪರಾಧಗಳ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿರುವ ಹಿನ್ನೆಲೆಯಲ್ಲಿ, ಅವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲು ಪೊಲೀಸರನ್ನು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕೋರಮಂಗಲದಲ್ಲಿ...

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

by Shwetha
April 3, 2026
0

ಮನ ಕಲುಕುವ ಘಟನೆ ಬೆಂಗಳೂರು ನಗರದಲ್ಲಿ ಸಂಭವಿಸಿದೆ. ಬಕೆಟ್‌ನಲ್ಲಿದ್ದ ನೀರಿನಲ್ಲಿ ಮುಳುಗಿ 11 ತಿಂಗಳ ಮಗು ಸಾವನ್ನಪ್ಪಿದ ದುರ್ಘಟನೆ ನಡೆದಿದ್ದು, ಈ ದುಃಖವನ್ನು ಸಹಿಸಲಾರದೆ ತಾಯಿ ಆತ್ಮಹತ್ಯೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram