`ಕೊಹ್ಲಿ ವಿಶ್ವಶ್ರೇಷ್ಠ ಕ್ರಿಕೆಟಿಗ, ಅವರಿಗೆ ಯಾವುದೇ ವೀಕ್ ನೆಸ್ ಇಲ್ಲ’
ಚೆನ್ನೈ : ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ವಿಶ್ವಶ್ರೇಷ್ಠ ಕ್ರಿಕೆಟಿಗ. ಅವರಿಗೆ ಯಾವುದೇ ರೀತಿಯ ವೀಕ್ ನೆಸ್ ಇಲ್ಲ.
ಅವರನ್ನು ಹೇಗೆ ಔಟ್ ಮಾಡುವುದು ಎಂಬುದು ನನಗೆ ಗೊತ್ತಿಲ್ಲ ಎಂದು ಇಂಗ್ಲೆಂಡ್ ಆಲ್ ರೌಂಡರ್ ಮೋಯಿನ್ ಅಲಿ ತಿಳಿಸಿದ್ದಾರೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಫೆಬ್ರವರಿ 5ರಿಂದ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಪ್ರಾರಂಭವಾಗಲಿದೆ.
.ಆಸ್ಟ್ರೇಲಿಯಾ ವಿರುದ್ಧ ಕೊನೆಯ ಮೂರು ಟೆಸ್ಟ್ ಪಂದ್ಯಗಳಿಂದ ಹೊರಬಂದಿದ್ದ ವಿರಾಟ್ ಕೊಹ್ಲಿ ಮತ್ತೆ ಭಾರತ ತಂಡ ಸೇರಿಕೊಂಡಿದ್ದು, ಭಾರತ ತಂಡ ಬಲಿಷ್ಠವಾಗಿದೆ ಎಂದು ಅಲಿ ಅಭಿಪ್ರಾಯಪಟ್ಟಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿರುವ ಅಲಿ, ನಾವು ಕೊಹ್ಲಿ ಅವರನ್ನು ಹೇಗೆ ಔಟ್ ಮಾಡಬೇಕು..?
ಅವರೊಬ್ಬ ಅದ್ಭುತ ಆಟಗಾರ, ವಿಶ್ವಶ್ರೇಷ್ಠ ಬ್ಯಾಟ್ಸ್ ಮನ್ ಹಾಗೂ ಇತರರನ್ನು ಅತ್ಯುತ್ತಮವಾಗಿ ಕೆಲಸ ಮಾಡಲು ಪ್ರೇರೇಪಿಸುತ್ತಾರೆ.
ಆಸ್ಟ್ರೇಲಿಯಾ ತಂಡದ ವಿರುದ್ಧ ಸರಣಿ ಗೆದ್ದ ಮೇಲಂತೂ ಅವರು ಇನ್ನು ಹೆಚ್ಚಿನ ರೀತಿಯಲ್ಲಿ ಪ್ರೇರೇಪಿಸುತ್ತಾರೆ ಎಂಬುದು ನನಗೆ ಖಾತ್ರಿಯಿದೆ ಎಂದಿದ್ದಾರೆ.
ಇನ್ನು ಅವರನ್ನ ಹೇಗೆ ಔಟ್ ಮಾಡಬೇಕು ಎಂಬೋದು ನನಗೆ ತಿಳಿದಿಲ್ಲ. ಏಕೆಂದರೆ ಅವರಿಗೆ ಯಾವುದೇ ರೀತಿಯ ದೌರ್ಬಲ್ಯವಿದೆ ಎಂದು ನಾನು ಭಾವಿಸುವುದಿಲ್ಲ ಎಂದು ತಿಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel