ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾ… ತಂಡದಲ್ಲಿ ಯಾರೆಲ್ಲಾ ಇದ್ದಾರೆ…!
ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಗೆ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ.
ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಗೆ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್, ಹಾರ್ದಿಕ್ ಪಾಂಡ್ಯ ಅವರನ್ನು ಟೆಸ್ಟ್ ತಂಡದಿಂದ ಕೈಬಿಡಲಾಗಿದೆ.
ಬದಲಾಗಿ ಯುವ ಆಟಗಾರರಿಗೆ ಅವಕಾಶ ಕಲ್ಪಿಸಲಾಗಿದೆ. ಮಯಾಂಕ್ ಅಗರ್ ವಾಲ್, ಪೃಥ್ವಿ ಶಾ, ಶುಬ್ಮನ್ ಗಿಲ್, ನವದೀಪ್ ಸೈನಿ, ಮಹಮ್ಮದ್ ಸಿರಾಜ್‍ಗೆ ಸ್ಥಾನವನ್ನು ನೀಡಲಾಗಿದೆ.
ಇನ್ನುಳಿದಂತೆ ರಿಷಬ್ ಪಂತ್ ಮತ್ತು ವೃದ್ದಿಮಾನ್ ಅವರನ್ನು ವಿಕೆಟ್ ಕೀಪರ್ ಗಳಾಗಿ ಆಯ್ಕೆ ಮಾಡಲಾಗಿದೆ.
ಹಾಗೇ ಕುಲದೀಪ್ ಯಾದವ್, ರವೀಂದ್ರ ಜಡೇಜಾ ಮತ್ತು ಆರ್. ಅಶ್ವಿನ್ ಸ್ಪಿನ್ನ ವಿಭಾಗದಲ್ಲಿ ಕಾಣಿಸಿಕೊಂಡಿದ್ದಾರೆ.
ವೇಗದ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರಿತ್ ಬೂಮ್ರಾ, ಉಮೇಶ್ ಯಾದವ್, ಮಹಮ್ಮದ್ ಶಮಿ, ನವದೀಪ್ ಸೈನಿ ಮತ್ತು ಮಹಮ್ಮದ್ ಸಿರಾಜ್ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ. ಇಶಾಂತ್ ಶರ್ಮಾ ಅವರು ಗಾಯದಿಂದ ಇನ್ನೂ ಚೇತರಿಸಿಕೊಂಡಿಲ್ಲ. ಭುವನೇಶ್ವರ್ ಕೂಡ ಗಾಯದಿಂದಾಗಿ ಐಪಿಎಲ್ ನಿಂದ ಹೊರಗುಳಿದಿದ್ದರು.
ಇನ್ನುಳಿದಂತೆ ವಿರಾಟ್ ಕೊಹ್ಲಿ ನಾಯಕನಾಗಿದ್ರೆ, ಅಜ್ಯಂಕ್ಯಾ ರಹಾನೆ ಉಪನಾಯಕನಾಗಿದ್ದಾರೆ. ಹಾಗೇ ಕೆ.ಎಲ್. ರಾಹುಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ಪೃಥ್ವಿ ಶಾ, ಮಯಾಂಕ್ ಅಗರ್ ವಾಲ್ ಹಾಗೂ ಶುಬ್ಮನ್ ಗಿಲ್ ಬ್ಯಾಟ್ಸ್ ಮೆನ್ ಗಳಾಗಿ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಟೆಸ್ಟ್ ಸರಣಿ ಡಿಸೆಂಬರ್ 17ರಿಂದ ಆರಂಭವಾಗಲಿದೆ. ಮೊದಲ ಟೆಸ್ಟ್ ಪಂದ್ಯ ಹಗಲು ರಾತ್ರಿ ನಡೆಯಲಿದೆ.
ಡಿಸೆಂಬರ್ 26ರಿಂದ ಬಾಕ್ಸಿಂಗ್ ಡೇ ಹಾಗೂ ಎರಡನೇ ಟೆಸ್ಟ್ ಪಂದ್ಯ ಮೆಲ್ಬರ್ನ್ ನಲ್ಲಿ ನಡೆಯಲಿದೆ. ಜನವರಿ 7ರಿಂದ ಸಿಡ್ನಿಯಲ್ಲಿ ಮೂರನೇ ಟೆಸ್ಟ್ ಪಂದ್ಯ ನಡೆಯಲಿದೆ. ಹಾಗೇ ಜನವರಿ 15ರಿಂದ ನಾಲ್ಕನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್ ನಲ್ಲಿ ಆರಂಭವಾಗಲಿದೆ.
ಟೀಮ್ ಇಂಡಿಯಾದ ಟೆಸ್ಟ್ ತಂಡ
ವಿರಾಟ್ ಕೊಹ್ಲಿ (ನಾಯಕ), ಅಜ್ಯಂಕ್ಯಾ ರಹಾನೆ (ಉಪನಾಯಕ), ಮಯಾಂಕ್ ಅಗರ್ ವಾಲ್, ಪೃಥ್ವಿ ಶಾ, ಕೆ.ಎಲ್. ರಾಹುಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ಶುಬ್ಮನ್ ಗಿಲ್, ವೃದ್ದಿಮಾನ್ ಶಾಹ, ರಿಷಬ್ ಪಂತ್, ಜಸ್ಪ್ರಿತ್ ಬೂಮ್ರಾ, ಮಹಮ್ಮದ್ ಶಮಿ, ಉಮೇಶ್ ಯಾದವ್, ನವದೀಪ್ ಸೈನಿ, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಆರ್. ಅಶ್ವಿನ್, ಮಹಮ್ಮದ್ ಸಿರಾಜ್.