ಬೆಂಗಳೂರು: ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ಬೆಂಗಳೂರಿನಲ್ಲಿರುವ ಒನ್ 8 ಕಮ್ಯೂನ್ ಬಾರ್ ಆ್ಯಂಡ್ ರೆಸ್ಟೋರೆಂಟ್ನಲ್ಲಿ ಅಗ್ನಿ ಸುರಕ್ಷತೆ ಅಳವಡಿಸಿಲ್ಲ ಮತ್ತು ಅಗ್ನಿಶಾಮಕ ದಳದ ಪ್ರಮಾಣ ಪತ್ರ ಪಡೆಯದೆ ಕಾನೂನು ಉಲ್ಲಂಘನೆ ಮಾಡಿದ ಆರೋಪದ ಮೇಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೋಟಿಸ್ ನೀಡಿದೆ.
BBMP-ನೋಟಿಸ್ ವಿವರಗಳು:
ಸ್ಥಳ:ಎಂ.ಜಿ. ರಸ್ತೆ, ರತ್ನಂ ಕಾಂಪ್ಲೆಕ್ಸ್, 6ನೇ ಮಹಡಿ
ಆರೋಪ:ಅಗ್ನಿ ಸುರಕ್ಷತೆ ಅಳವಡಿಸಿಲ್ಲ ಮತ್ತು ಅಗ್ನಿಶಾಮಕ ದಳದ ಪ್ರಮಾಣ ಪತ್ರವಿಲ್ಲ.
ನೋಟಿಸ್ಗೆ ಪ್ರತಿಕ್ರಿಯೆ ನೀಡದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬಿಬಿಎಂಪಿ ಮುಖ್ಯ ಆಯುಕ್ತರ ಪ್ರತಿಕ್ರಿಯೆ:
ತುಷಾರ್ ಗಿರಿನಾಥ್: “ಬಾರ್ ಆ್ಯಂಡ್ ರೆಸ್ಟೋರೆಂಟ್ಗಳಲ್ಲಿ ಕಾನೂನು ನಿಯಮ ಉಲ್ಲಂಘನೆಗೆ ನೋಟಿಸ್ ನೀಡುವ ವೇಳೆ ಮಾಲಿಕತ್ವವನ್ನು ಗಮನಿಸುವುದಿಲ್ಲ. ಪರವಾನಗಿ ಯಾರ ಹೆಸರಿನಲ್ಲಿ ಇದೆ ಎಂಬುದನ್ನು ನೋಡಿಕೊಂಡು ನೋಟಿಸ್ ನೀಡಲಾಗುತ್ತದೆ.”
ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಈ ಬಗ್ಗೆ ದೂರು ನೀಡಿದ್ದು, ಶಾಂತಿನಗರ ಪಾಲಿಕೆ ಅಧಿಕಾರಿಗಳು ನೋಟಿಸ್ ನೀಡಿದ್ದರು. ಈ ಹಿಂದೆ ಕೂಡ ಒಂದು ಬಾರಿ ನೋಟಿಸ್ ನೀಡಿದ್ದರೂ ಉತ್ತರಿಸದೇ ನಿರ್ಲಕ್ಷ್ಯ ವಹಿಸಲಾಗಿದೆ.