ICC ranking :: 2ನೇ ಸ್ಥಾನದಲ್ಲಿ ವಿರಾಟ್.. ಮೂರರಲ್ಲಿ ರೋಹಿತ್ Kohli retains 2nd spot in ICC ranking
ಐಸಿಸಿ ಏಕದಿನ ಶ್ರೇಯಾಂಕ ಪಟ್ಟಿ ಬಿಡುಗಡೆಯಾಗಿದ್ದು, ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ನಾಯಕತ್ವ ಜವಾಬ್ದಾರಿಯಿಂದ ಕೆಳಗಿಳಿದ ಬಳಿಕ ವಿರಾಟ್ ಕೊಹ್ಲಿ, ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಬ್ಯಾಟರ್ ಆಗಿ ಕಣಕ್ಕಿಳಿಸಿದ್ದರು. ಮೂರು ಮ್ಯಾಚ್ ಗಳ ಸರಣಿಯಲ್ಲಿ ವಿರಾಟ್, 116 ರನ್ ದಾಖಲಿಸಿದ್ದರು. ಹೀಗಾಗಿ ಶ್ರೇಯಾಂಕ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಕೊಹ್ಲಿ ಉಳಿಸಿಕೊಂಡಿದ್ದಾರೆ.
ಐಸಿಸಿ ಏಕದಿನ ರ್ಯಾಂಕಿಂಗ್ ನಲ್ಲಿ 873 ಅಂಕಗಳೊಂದಿಗೆ ಪಾಕಿಸ್ತಾನದ ನಾಯಕ ಬಾಬರ್ ಅಝಮ್ ಅಗ್ರಸ್ಥಾನದಲ್ಲಿದ್ದರೇ, 836 ಅಂಕಗಳೊಂದಿಗೆ ವಿರಾಟ್ ಎರಡನೇ ಸ್ಥಾನದಲ್ಲಿದ್ದಾರೆ. ರೋಹಿತ್ ಶರ್ಮಾ 801 ಅಂಕ ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.
ಹಾಗೇ ಬೌಲಿಂಗ್ ವಿಭಾಗದಲ್ಲಿ ನ್ಯೂಜಿಲೆಂಡ್ ನ ಟ್ರೆಂಟ್ ಬೌಲ್ಟ್ ಹಾಗೂ ಆಸ್ಟ್ರೇಲಿಯಾದ ಜೋಶ್ ಹಾಝಲ್ ವುಡ್ ಅವರು ಮೊದಲ ಮತ್ತು ಎರಡನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಭಾರತದ ಭುವನೇಶ್ವರ್ ಕುಮಾರ್ ಅವರು ನಾಲ್ಕು ಸ್ಥಾನ ಹಿನ್ನಡೆ ಅನುಭವಿಸಿದ್ದಾರೆ. ಸದ್ಯ ಭುವಿ 22ನೇ ಸ್ಥಾನದಲ್ಲಿದ್ದಾರೆ.