Kolar : ಬುದ್ದಿವಾದ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ…
ಕೋಲಾರ : ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಮುಳಬಾಗಲು ತಾಲ್ಲೂಕಿನ ಮುಷ್ಟೂರು ಗ್ರಾಮದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗ್ರಾಮದ 9ನೇ ತರಗತಿ ವಿದ್ಯಾರ್ಥಿ ಉದಯ್ ಕುಮಾರ್ ಸೋಮವಾರ ವಿಷ ಸೇವಿಸಿದ್ದ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಕೋಲಾರ ಜಿಲ್ಲೆಯ ಮುಳಬಾಗಲು ತಾಲ್ಲೂಕಿನ ತಾತಿಕಲ್ ಗ್ರಾಮದ ಸರ್ಕಾರಿ ಆದರ್ಶ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಉದಯ್ ಕುಮಾರ್ , ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಸೋಮವಾರ ವಿಷಸೇವಿಸಿದ್ದ, ಕೂಡಲೇ ಉದಯ್ ಕುಮಾರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಈ ಬಗ್ಗೆ ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಉದಯ್ ಕುಮಾರ್ ಆಟೋಟಗಳ ಕಡೆಯೇ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದರಿಂದ ಓದಿನ ಕಡೆ ಗಮನ ಹರಿಸುವಂತೆ ಪೋಷಕರು ಬುದ್ದಿ ಹೇಳಿದ್ದಾರೆ ಎನ್ನಲಾಗಿದೆ. ಇಷ್ಟಕ್ಕೆ ಬಾಲಕ ಮನನೊಂದು ಆತ್ಮಹತ್ಯೆ ಮಾಡಿಕೊಂದ್ದಾನೆ.
Kolar: 9th class student commits suicide in mulabagilu kolar








