ಕೋಲಾರ ಜಿಲ್ಲಾಸ್ಪತ್ರೆ ವೈದ್ಯರನ್ನ ತರಾಟೆಗೆ ತೆಗೆದುಕೊಂಡ ಡಿಸಿಎಂ
ಕೋಲಾರ: ಕೋಲಾರದಲ್ಲಿ ಎಸ್.ಎನ್.ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕದ ಸಮಸ್ಯೆ ಉಂಟಾಗಿ ಸೋಮವಾರ ರಾತ್ರಿ ನಾಲ್ವರು ಸಾವನ್ನಪ್ಪಿದ ಬೆನ್ನಲ್ಲೇ ಜಿಲ್ಲೆಗೆ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು, ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ಕೋವಿಡ್ ಎರಡೂ ಅಲೆಗಳ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದವರ ಬಗ್ಗೆ ಸಮರ್ಪಕ ಮಾಹಿತಿ ಇಲ್ಲದ ಕಾರಣಕ್ಕೆ ಡಾ.ಆಶ್ವತ್ಥನಾರಾಯಣ, ವೈದ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.
ಮೊದಲ ಅಲೆ ಬಂದಾಗಿನಿಂದ ಏನು ಮಾಡುತ್ತಿದ್ದೀರಿ. ಎಷ್ಟು ಸೋಂಕಿತರು ಬಂದರು. ಎಷ್ಟು ಜನ ದಾಖಲಾದರು. ಎಷ್ಟು ಜನ ಚಿಕಿತ್ಸೆ ಪಡೆದರು. ಇತ್ಯಾದಿ ಮಾಹಿತಿ ಇಲ್ಲದಿದ್ದರೆ ಹೇಗೆ. ಸರಿಯಾಗಿ ಮಾಹಿತಿಯೇ ಇಲ್ಲದಿದ್ದರೆ ನೀವು ಉತ್ತಮ ಸೌಲಭ್ಯ ನೀಡಲು ಪೂರ್ವ ಸಿದ್ಧತೆ ಮಾಡಿಕೊಳ್ಳಲು ಹೇಗೆ ಸಾಧ್ಯ. ಎಂದು ತರಾಟೆಗೆ ತೆಗೆದುಕೊಂಡರು.