Kolar | ಸಂವಿಧಾನ ಶಿಲ್ಪಿಗೆ ಅವಮಾನ : ಕೋಲಾರದಲ್ಲಿ ಪ್ರತಿಭಟನೆ
ಕೋಲಾರ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ವಿಕೃತವಾಗಿ ಬಿಂಬಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಖಂಡಿಸಿ ಕೋಲಾರ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಕಚೇರಿ ಮುಂದೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿದೆ.
ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಚವ್ವೇನಹಳ್ಳಿ ವಿಜಿ ಹಾಗೂ ತಾಲೂಕು ಸಂಚಾಲಕ ಎಸ್.ಎಂ.ವೆಂಕಟೇಶ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದೆ.

ಪ್ರತಿಭಟನೆ ವೇಳೆ ವಿಕೃತವಾಗಿ ಪೋಸ್ಟ್ ಮಾಡಿರುವ ವ್ಯಕ್ತಿಯ ವಿರುದ್ಧ ದೇಶ ದ್ರೋಹ ಕಾಯ್ದೆ ದಾಖಲಿಸಿ ಗಡಿಪಾರು ಮಾಡುವಂತೆ ಆಗ್ರಹ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ರಾಷ್ಟ್ರೀಯ ನಾಯಕರನ್ನ ವಿಕೃತವಾಗಿ ಬಿಂಬಿಸಿದರೂ ಸರ್ಕಾರ ಕಣ್ಣು ಮುಚ್ಚಿ ಕುಳಿತಿರೊದು ಖಂಡನೀಯ.
ಕಿಡಿಗೇಡಿಗಳ ಗುಂಪಿನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಲಾಗಿದೆ.
ಮಾಲೂರು ತಾಲೂಕು ಕಚೇರಿ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಿ ಆಕ್ರೋಶ ಹೊರಹಾಕಿದ್ದಾರೆ.