Kolar | ಪೊಲೀಸ್ ಠಾಣೆಯಲ್ಲೇ ಪೊಲೀಸರ ಪಾರ್ಟಿ!
ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಘಟನೆ
ಶ್ರೀನಿವಾಸಪುರದ ಗೌನಿಪಲ್ಲಿ ಪೊಲೀಸ್ ಠಾಣೆ
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್
ಠಾಣೆಯಲ್ಲಿ ಸಿಬ್ಬಂದಿಯಿಂದ ಮದ್ಯಪಾನ ಸೇವನೆ
ಕೋಲಾರ : ಠಾಣೆಯಲ್ಲಿಯೇ ಪೊಲೀಸ್ ಸಿಬ್ಬಂದಿ ಮದ್ಯಪಾನ ಮಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ.
ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಪೊಲೀಸ್ ಸಿಬ್ಬಂದಿಯನ್ನು ಚಲಪತಿ, ಆಂಜಿ, ಮಂಜುನಾಥ್ ಎಂದು ಗುರುತಿಸಲಾಗಿದೆ.
ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಿಬ್ಬಂದಿ ವಿರುದ್ಧ ನೆಟ್ಟಿಗರು ಆಕ್ರೋಶ ಹೊರಹಾಕುತ್ತಿದ್ದಾರೆ.
ಕೆಲಸದ ಸಮಯದಲ್ಲಿ ಎಣ್ಣೆ ಪಾರ್ಟಿ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.