Siddaramaiah | ಚಿನ್ನದ ನಾಡಿಗೆ ಟಗರು.. “ಕೈ”ಗೆ ಲಾಭನಾ..? ನಷ್ಟನಾ..?
ಕೋಲಾರ : ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಅನ್ನುವ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಗಿರಗಿಟ್ಟಲೇ ಹೊಡೆಯುತ್ತಿದೆ.
ಕಾಂಗ್ರೆಸ್ ನ ಮಾಸ್ ಲೀಡರ್ ಸಿದ್ದರಾಮಯ್ಯ ಈ ಬಾರಿ ಕೋಲಾರದಿಂದಲೇ ಸ್ಪರ್ಧಿಸುತ್ತಾರೆ ಅನ್ನೋವ ಮಾತುಗಳು ಹಾಗೇ ಅವರು ಕೋಲಾರದಿಂದಲೇ ಸ್ಪರ್ಧಿಸಬೇಕು ಎಂದು ಚಿಕ್ಕಬಳ್ಳಾಪುರ – ಕೋಲಾರ ಜಿಲ್ಲಾ ಕಾಂಗ್ರೆಸ್ ನಾಯಕರ ಒತ್ತಾಸೆ ಕೂಡ ಆಗಿದೆ.
ಸದ್ಯ ಬದಾಮಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಸಿದ್ದರಾಮಯ್ಯ, ಮುಂದಿನ ಚುನಾವಣೆಯಲ್ಲಿ ಬೆಂಗಳೂರಿಗೆ ಹತ್ತಿರವಾಗುವ ಕ್ಷೇತ್ರದಿಂದ ಸ್ಪರ್ಧಿಸಲು ಇಚ್ಛಿಸಿದ್ದಾರೆ. ಇದಕ್ಕೆ ಕಾರಣ ಬದಾಮಿ ಕ್ಷೇತ್ರ ಬೆಂಗಳೂರಿನಿಂದ ದೂರ ಇರೋದು.
ಇದು ಒಂದು ಕಡೆಯಾದ್ರೆ ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿಯೇ ಸಿದ್ದರಾಮಯ್ಯ ಅವರು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು.
ಆದ್ರೆ ಕೊನೆ ಕ್ಷಣದಲ್ಲಿ ಸಿದ್ದರಾಮಯ್ಯ ಬದಾಮಿ ಕಡೆ ವಾಲಿದರು. ಈ ಬಾರಿ ಸಿದ್ದರಾಮಯ್ಯ ಅವರನ್ನ ಕೋಲಾರಕ್ಕೆ ಕರೆತರಬೇಕು ಎಂದು ಎರಡು ಜಿಲ್ಲೆಯ ಕಾಂಗ್ರೆಸ್ ನಾಯಕರು ಪಟ್ಟು ಹಿಡಿದಿದ್ದಾರೆ.
ಹಾಗಾದ್ರೆ ಸಿದ್ದರಾಮಯ್ಯ ಕೋಲಾರ ಕ್ಷೇತ್ರಕ್ಕೆ ಬರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಆಗುವ ಲಾಭಗಳೇನು..?

ಒಂದು ವೇಳೆ ಸಿದ್ದರಾಮಯ್ಯ ನವರು ಕೋಲಾರದಲ್ಲಿ ಸ್ಪರ್ಧೆ ಮಾಡಿದ್ರೆ ಕಾಂಗ್ರೆಸ್ ಪಕ್ಷಕ್ಕೆ ಮೊದಲು ಆಗುವ ಲಾಭ ಅಂದ್ರೆ ಅದು.. ಕೋಲಾರ – ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮತಗಳ ಧ್ರುವೀಕರಣ..!!
ಹೌದು..! ಸಿದ್ದರಾಮಯ್ಯ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದೇ ಯಾದ್ದಲ್ಲಿ ಅವಳಿ ಜಿಲ್ಲೆಗಳ ರಾಜಕೀಯ ಲೆಕ್ಕಾಚಾರಗಳು ಏರುಪೇರಾಗಲಿದೆ.
ಕುರುಬ ಸಮುದಾಯದ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ ಸಮುದಾಯದಲ್ಲಿ ತಮ್ಮದೇಯಾದ ಬೆಂಬಲಿಗರ ಮಹಾ ಸಮುದ್ರವನ್ನು ಹೊಂದಿದ್ದಾರೆ.
ಅವರು ಅಹಿಂದ ಮತದಾರರ ಮೇಲೆ ನೇರವಾಗಿ ಪ್ರಭಾವವನ್ನು ಹೊಂದಿದ್ದಾರೆ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಒಟ್ಟು 11 ವಿಧಾನಸಭಾ ಕ್ಷೇತ್ರಗಳಿವೆ. ಈ ಕ್ಷೇತ್ರಗಳಲ್ಲಿ ಅಹಿಂದ ಮತಗಳು ನಿರ್ಣಾಯಕವಾಗಿವೆ.
ಈ ಹಿನ್ನೆಲೆಯಲ್ಲಿ ನೋಡಿದ್ರೆ ಕೋಲಾರಕ್ಕೆ ಸಿದ್ದರಾಮಯ್ಯ ಬಂದರೇ ಕಾಂಗ್ರೆಸ್ ಪಕ್ಷದ ಶಕ್ತಿ ಡಬಲ್ ಆಗಲಿದೆ. ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಅಹಿಂದ ಮತದಾರರನ್ನು ಕಾಂಗ್ರೆಸ್ ತೆಕ್ಕೆಯಲ್ಲಿ ಉಳಿಸಿಕೊಳ್ಳಲು ಅನುಕೂಲವಾಗಲಿದೆ.
ಇನ್ನು ಕೋಲಾರದಲ್ಲಿ ಸಿದ್ದರಾಮಯ್ಯ ಗೆಲುವಿನ ಲೆಕ್ಕಾಚಾರ ಹೇಗಿದೆ.. ಅನ್ನೋದನ್ನ ನೋಡೋದಾದ್ರೆ.. ಚಿನ್ನದ ನಾಡು ಕೋಲಾರ ಕಾಂಗ್ರೆಸ್ ಭದ್ರಕೋಟೆಗಳಲ್ಲಿ ಒಂದು. ಕೋಲಾರ – ಚಿಕ್ಕಬಳ್ಳಾಪುರ ಜಿಲ್ಲೆಗಳ ಒಟ್ಟು 11 ವಿಧಾನಸಭಾ ಕ್ಷೇತ್ರಗಳಲ್ಲಿ ಕಳೆದ ಬಾರಿ 9 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು.

ಇಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ನೇರಾ ಜಿದ್ದಾಜಿದ್ದಿ ಇದೆ. ಆದ್ರೂ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಿದ್ರೆ ಗೆಲುವು ಸುಲಭ ಎಂದು ಅಂದಾಜಿಸಲಾಗುತ್ತಿದೆ. ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳ ಸಂಖ್ಯೆ ಹೆಚ್ಚಾಗಿಯೇ ಇದ್ದು, ಸ್ಥಳೀಯ ನಾಯಕರು ಕೂಡ ಸಿದ್ದುಗೆ ಜೈಕಾರ ಹಾಕುತ್ತಾರೆ.
ಇದು ಸಿದ್ದರಾಮಯ್ಯ ಅವರ ಗೆಲುವನ್ನ ಮತ್ತಷ್ಟು ಸುಲಭ ಮಾಡಬಹುದು. ಜೊತೆಗೆ 2023ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವ ಸಾಧ್ಯತೆಗಳಿವೆ.
ಆಗ ಕೆ.ಸಿ.ರೆಡ್ಡಿ ಬಳಿಕ ಅವಿಭಜಿತ ಕೋಲಾರ ಜಿಲ್ಲೆಯಿಂದ ಸಿಎಂ ಆಗಿಲ್ಲ. ಒಂದು ವೇಳೆ ಸಿದ್ದರಾಮಯ್ಯ ಸಿಎಂ ಆದ್ರೆ ಅವಳಿ ಜಿಲ್ಲೆಯ ಅಭಿವೃದ್ಧಿಗೆ ಅನುಕೂಲವಾಗಲಿದೆ.
ಒಟ್ಟಿನಲ್ಲಿ ಕಾಂಗ್ರೆಸ್ ನ ಹುಲಿಯಾ ಸಿದ್ದರಾಮಯ್ಯ ಸ್ಥಳೀಯ ನಾಯಕರ ಮನವಿಯಂತೆ ಕೋಲಾರಕ್ಕೆ ಬರ್ತಾರಾ ಅನ್ನೋದಕ್ಕೆ ಕಾಲವೇ ಉತ್ತರಿಸಬೇಕಾಗಿದೆ.