ಕೋಲಾರದಲ್ಲಿ ಏಕಕಾಲಕ್ಕೆ 3 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

1 min read

ಕೋಲಾರದಲ್ಲಿ ಏಕಕಾಲಕ್ಕೆ 3 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ kolar

ಕೋಲಾರ : ನಗರದ ಎಸ್.ಎನ್.ಆರ್. ಜಿಲ್ಲಾಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಏಕಕಾಲಕ್ಕೆ ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಸುಮಾರು ಅರ್ಧ ಗಂಟೆ ಕಾಲ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ ಮೂವರು ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

kolar

ಮುನಿರತ್ನಮ್ಮ ಎಂಬೋರು ಮೂರು ಮಕ್ಕಳಿಗೆ ಜನ್ಮ ನೀಡಿದ್ದು, ಇವರು ಗರ್ಭಿಣಿಯಾಗಿದ್ದಾಗ ಹೊಟ್ಟೆಯಲ್ಲಿ ಮೂರು ಮಕ್ಕಳಿರುವ ವಿಚಾರ ತಿಳಿದು ಬಂದಿತ್ತು. ಅಪೌಷ್ಟಿಕತೆ ಉಂಟಾಗದ ರೀತಿಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಲಾಗಿತ್ತು.

ಹೆರಿಗೆ ತಜ್ಞರಾದ ಡಾ. ನಾಗವೇಣಿ ಎಂಬುವರು ಸುಮಾರು ಅರ್ಧ ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿ ಹೆರಿಗೆ ಮಾಡಿಸಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd