Kolara : ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟ ತಾಯಿ – ತಾನೂ ಆತ್ಮಹತ್ಯೆ ಯತ್ನ…
ತಾಯಿಯೇ ತನ್ನ ಇಬ್ಬರು ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಲಾರ ಜಿಲ್ಲೆಯಲ್ಲಿ ನಡೆದಿದೆ.
ಕೊಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಅಂಜನಾದ್ರಿ ಬೆಟ್ಟದಲ್ಲಿ ಈ ಪ್ರಕರಣ ನಡೆದಿದೆ. ಆಂಧ್ರಪ್ರದೇಶ ಮೂಲದ ಜ್ಯೋತಿ ಆತ್ಮಹತ್ಯೆಗೆ ನಿರ್ಧರಿಸಿರುವ ತಾಯಿ. ತನ್ನಿಬ್ಬರು ಮಕ್ಕಳಿಗೆ ಪೆಟ್ರೋಲ್ ಸುರಿದು ಸುಟ್ಟಿದ್ದಾರೆ.
ಮಕ್ಕಳ ಚೀರಾಟ ಕೇಳಿ ಮನೆಯಿಂದ ಹೊರಬಂದ ಗ್ರಾಮಸ್ಥರು ಬೆಂಕಿಯನ್ನ ನಂದಿಸಿ ತಾಯಿ ಮಕ್ಕಳ ರಕ್ಷಣೆಗೆ ಮುಂದಾಗಿದ್ದಾರೆ ಆದರೆ ಅಷ್ಟರಲ್ಲಿ ಮಗುವೊಂದು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ.
ಮತ್ತೊಂದು ಮಗುವಿನ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮುಳಬಾಗಿಲು ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.
Kolara: The mother who poured petrol on the children and set them on fire – also attempted suicide…