ಮನೆಗೆ ಕನ್ನ ಹಾಕಲು ಹೋಗಿ ಸಿಕ್ಕಿಬಿದ್ದ ಕಳ್ಳಿಯರು
ಕೋಲಾರ : ಯಾರು ಇಲ್ಲದ ವೇಳೆ ಮನೆಗೆ ಕನ್ನ ಹಾಕಲು ಮುಂದಾಗಿ ಕಳ್ಳಿಯರನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಕೋಲಾರದ ಹೋಳೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಮತ ಎಂಬುವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹಿಳೆಯರು ಕಳ್ಳತನಕ್ಕೆ ಯತ್ನಿಸಿದ್ದಾರೆ.
ಈ ವೇಳೆ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದು, ಧರ್ಮದೇಟು ತಿಂದಿದ್ದಾರೆ.
ಬಳಿಕ ಗ್ರಾಮಸ್ಥರು ಕೋಲಾರ ಗ್ರಾಮಾಂತರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು, ಕಳ್ಳಿಯರನ್ನು ವಶಕ್ಕೆ ಪಡೆದಿದ್ದಾರೆ.
ಸದ್ಯ ಈ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.