ಇಡೀ ದೇಶದಲ್ಲಿ ಭಾರಿ ಆಕ್ರೋಶ ಮತ್ತು ಪ್ರತಿಭಟನೆಗೆ ಕಾರಣವಾಗಿದ್ದ ಕೋಲ್ಕತ್ತದ ಆರ್.ಜಿ.ಕರ್ ವೈದ್ಯಕೀಯ ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ & ಕೊಲೆ ಪ್ರಕರಣದ ಬಹು ನಿರೀಕ್ಷಿತ ತೀರ್ಪು ಇಂದು ಪ್ರಕಟವಾಗಲಿದೆ. ಸ್ಥಳೀಯ ಪೊಲೀಸರಿಗೆ ಸ್ವಯಂ ಸೇವಕನಂತೆ ಕೆಲಸ ಮಾಡುತ್ತಿದ್ದ ಸಂಜಯ್ ರಾಯ್ ಎಂಬಾತ ಈ ಪ್ರಕರಣದ ಮುಖ್ಯ ಆರೋಪಿ. ಸಿಯಾಲ್ಲಾ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಅನಿರ್ಬನ್ ದಾಸ್ ಪ್ರಕರಣದ ವಿಚಾರಣೆ ಆರಂಭಿಸಿದ 57 ದಿನಗಳ ಬಳಿಕ ಇಂದು ತೀರ್ಪು ಹೊರ ಬೀಳಲಿದೆ.
ಆರೋಪಿ ಸಂಜಯ್ ರಾಯ್‌ಗೆ ಮರಣದಂಡನೆ ವಿಧಿಸಬೇಕು ಎಂದು ಕೇಂದ್ರ ತನಿಖಾ ದಳ (ಸಿಬಿಐ) ವಾದ ಮಂಡಿಸಿತ್ತು.








