ಉಡುಪಿ: ಜೂ. ಎನ್ ಟಿಆರ್ ಹಾಗೂ ಕುಟುಂಬ ಕೊಲ್ಲೂರು ಮೂಕಾಂಬಿಕೆ (Kollur Mookambika Temple) ದೇವಿಯ ದರ್ಶನ ಪಡೆದಿದ್ದಾರೆ.
ನಿನ್ನೆಯಷ್ಟೇ ಉಡುಪಿ (Udupi) ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದ ಅವರು ಇಂದು ಮೂಕಾಂಬಿಕೆ ದೇವಿಯ ದರ್ಶನ ಪಡೆದಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರು ದೇಗುಲದಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ, ಕೆಜಿಎಫ್ ಖ್ಯಾತಿಯ ಡೈರೆಕ್ಟರ್ ಪ್ರಶಾಂತ್ ನೀಲ್ ಕುಟುಂಬವೂ ಜೊತೆಯಾಗಿದೆ. ಲಾಫಿಂಗ್ ಬುದ್ಧ ನಟ ಪ್ರಮೋದ್ ಶೆಟ್ಟಿ ಸಹ ಜೊತೆಗೆ ಬಂದು ದೇವರ ದರ್ಶನ ಮಾಡಿದ್ದಾರೆ. ಹೀಗಾಗಿ ನಾಲ್ಕು ಕುಟುಂಬಗಳು ಕೊಲ್ಲೂರಿನಲ್ಲಿ ಜೊತೆಯಾಗಿ ಬಂದು ದರ್ಶನ ಪಡೆದು, ಪ್ರಸಾದ ಸ್ವೀಕರಿಸಿವೆ.
ಜೂ.ಎನ್‌ಟಿಆರ್ ತಾಯಿ ಶಾಲಿನಿ ನಂದಮೂರಿ ಅವರು ಬರೋಬ್ಬರಿ ನಾಲ್ಕು ದಶಕಗಳ ನಂತರ ಕರಾವಳಿಗೆ ಬಂದಿದ್ದಾರೆ. ಈ ವೇಳೆ ಕೊಲ್ಲೂರು ಆಡಳಿತದಿಂದ ನಟರಿಗೆ ಗೌರವ ಸಮರ್ಪಣೆ ಮಾಡಲಾಯಿತು.