ಕಾಲಿವುಡ್ (Kollywood) ನಟ ಬಿಜಿಲಿ ರಮೇಶ್ (Bijili Ramesh) ಇಂದು ಇಹಲೋಕ ತ್ಯಜಿಸಿದ್ದಾರೆ. ಹೀಗಾಗಿ ಇಂದು ಚೆನ್ನೈನ ಎಂಜಿಆರ್ ನಗರದಲ್ಲಿರುವ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಿಜಿಲಿ ರಮೇಶ್ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನಿಧನಕ್ಕೆ ಚಿತ್ರರಂಗದ ಗಣ್ಯರು, ಆಪ್ತರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.
ಸಿನಿಮಾದಲ್ಲಿ ಪೋಷಕ ಪಾತ್ರಗಳು ಮತ್ತು ಯೂಟ್ಯೂಬ್‌ನಲ್ಲಿ ಪ್ರ್ಯಾಂಕ್ ವಿಡಿಯೋಗಳನ್ನು ಅಪ್ಲೋಡ್ ಮಾಡಿ ಪ್ರಸಿದ್ಧಿಯಾಗಿದ್ದರು. ಬಿಜಿಲಿ ರಮೇಶ್ ಅವರು ಕುಡಿತದ ಚಟಕ್ಕೆ ದಾಸರಾಗಿದ್ದರು. ಇದರಿಂದ ಲಿವರ್‌ಗೆ ಸಂಬಂಧಿಸಿದ ಕಾಯಿಲೆಯಿಂದ ಅವರು ಹಲವಾರು ದಿನಗಳಿಂದ ಬಳಲುತ್ತಿದ್ದರು. ಹೀಗಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿದ್ದ. ಆದರೆ, ಈಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.








