Koppal | ಹಳ್ಳದಲ್ಲಿ ಕೊಚ್ಚಿಹೋದ ನಾಲ್ವರು ಮಹಿಳೆಯರು
ಕೊಪ್ಪಳ : ಯಲಬುರ್ಗಾ ತಾಲೂಕಿನ ಸಂಕನೂರು ಹಳ್ಳದಲ್ಲಿ ನಾಲ್ವರು ಮಹಿಳೆ ಕೊಚ್ಚಿ ಹೋಗಿದ್ದು, ಇಬ್ಬರು ಮಹಿಳೆಯರ ಮೃತದೇಹಗಳು ಪತ್ತೆಯಾಗಿವೆ.
40 ವರ್ಷದ ಭುವನೇಶ್ವರಿ ಪೊಲೀಸ್ ಪಾಟೀಲ್, ಗಿರಿಜಾ ಮಾಲಿಪಾಟೀಲ್ ಮೃತದೇಹ ಪತ್ತೆಯಾಗಿವೆ.
ಇನ್ನಿಬ್ಬರು ಮಹಿಳೆಯರ ಮೃತದೇಹಗಳು ಪತ್ತೆಯಾಗಿಲ್ಲ.

ಅವರಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿವತಿಯಿಂದ ಶೋಧ ಕಾರ್ಯ ಮುಂದುವರೆದಿದೆ.
ನಿನ್ನೆ ರಾತ್ರಿ ಹಳ್ಳದಲ್ಲಿ ಗಿರೀಜಾ ಮಾಲಿಪಾಟೀಲ್, ಭುವನೇಶ್ವರಿ ಪೊಲೀಸ್ ಪಾಟೀಲ್, ಪವಿತ್ರಾ ಪೊಲೀಸ್ ಪಾಟೀಲ್, ವೀಣಾ ಮಾಲಿಪಾಟೀಲ್ ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿದ್ದರು.