Koppal | ಭೀಕರ ಅಪಘಾತ – ಸ್ಥಳದಲ್ಲಿಯೇ ಐವರು ಸಾವು
ಕೊಪ್ಪಳ : ಸ್ಕಾರ್ಪಿಯೋ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲಿಯೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರ ಬಳಿ ನಡೆದಿದೆ.
ಘಟನೆಯಲ್ಲಿ ಕೊಪ್ಪದ(62), ಮೃತರ ಸೊಸೆ ಗಿರಿಜಮ್ಮ(45), ಅಣ್ಣನ ಮಕ್ಕಳಾದ ಶಾಂತಮ್ಮ(35), ಪಾರ್ವತಮ್ಮ (32), ಸಂಬಂಧಿ ಕಸ್ತೂರಮ್ಮ(20) ಮೃತಪಟ್ಟಿದ್ದಾರೆ.

ಚಾಲಕ ಹರ್ಷವರ್ಧನ, ಬಸವರಾಜ, ಪುಟ್ಟರಾಜ, ಭೂಮಿಕಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇವರು ಕುಕನೂರು ತಾಲೂಕಿನ ಬಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ್ ಕುಟುಂಬದ ಜೊತೆ ಸಂಬಂಧಿಯ ಮಗನ ಬರ್ತ್ ಡೇ ಆಚರಿಸಲು ಕೊಪ್ಪಳಕ್ಕೆ ಬಂದಿದ್ದರು.
ರಾತ್ರಿ ಹುಟ್ಟುಹಬ್ಬ ಮುಗಿಸಿಕೊಂಡು ಮರಳಿ ಬಿನ್ನಾಳ ಗ್ರಾಮಕ್ಕೆ ಬರುತ್ತಿದ್ದ ವೇಳೆ ರಾತ್ರಿ 10:30ರ ಸುಮಾರಿಗೆ ಲಾರಿವೊಂದು ಸ್ಕಾರ್ಪಿಯೋ ಕಾರಿಗೆ ಡಿಕ್ಕಿ ಹೊಡೆದಿದೆ.








