Koppala | ಹುಲಿಹೈದರ್ ಘರ್ಷಣೆ ಪ್ರಕರಣ : 25 ಮಂದಿ ಖಾಕಿ ವಶಕ್ಕೆ
ಕೊಪ್ಪಳ : ಹುಲಿಹೈದರ್ ಗ್ರಾಮದ ಘರ್ಷಣೆಯಲ್ಲಿ ಇಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 25ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.
ಅಲ್ಲದೇ ಪ್ರಕರಣ ಸಂಬಂಧ 58 ಜನರ ವಿರುದ್ಧ ದೂರು ದಾಖಲಾಗಿದೆ.
ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಆಗಸ್ಟ್ 11 ರಂದು ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರು ಮೃತಪಟ್ಟಿದ್ದರು.

ಇದಕ್ಕೆ ಸಂಬಂಧಿಸಿದ ದೃಶ್ಯವಳಿಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಇದನ್ನ ಆಧರಿಸಿ ಕನಕಗಿರಿ ಪೊಲೀಸರು ತನಿಖೆ ಆರಂಭಿಸಿದ್ದು, 25ಕ್ಕೂ ಹೆಚ್ಚು ಜನರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ನಿನ್ನೆ (ಆಗಸ್ಟ್ 11) ಮಾರಾಮಾರಿ ನಡೆದಿದ್ದು, ಇಬ್ಬರು ಮೃತಪಟ್ಟಿದ್ದಾರೆ.
ಇನ್ನು ಮಾರಾಮಾರಿಯಲ್ಲಿ ಯಂಕಪ್ಪ ತಳವಾರ (60), ಭಾಷಾಸಾಬ್ (22) ಮೃತರು. ಆರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.