ಸಿಎಂ ಬದಲಾದರೇ ಕೋಟ ಶ್ರೀನಿವಾಸ್ ಪೂಜಾರಿಗೆ ಪಟ್ಟ

1 min read
Minister Kota Srinivas Poojary car accident

ಸಿಎಂ ಬದಲಾದರೇ ಕೋಟ ಶ್ರೀನಿವಾಸ್ ಪೂಜಾರಿಗೆ ಪಟ್ಟ

ಕಾರವಾರ : ರಾಜ್ಯದಲ್ಲಿ ಪದೇ ಪದೇ ಮುಖ್ಯಮಂತ್ರಿ ಬದಲಾವಣೆ ಕೂಗು ಕೇಳಿಬರುತ್ತದೆ ಇದೆ.

ಸಂಕ್ರಾಂತಿ ಬಳಿಕ ರಾಜ್ಯದಲ್ಲಿ ಸಿಎಂ ಬದಲಾಗಲಿದ್ದಾರೆ ಎನ್ನುವ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಹರಿದಾಡುತ್ತಿವೆ.

ಈ ಬಗ್ಗೆ ಆರ್ಯ ಈಡಿಗ ರಾಷ್ಟ್ರೀಯ ಮಹಾಮಂಡಳದ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಸಿಎಂ ಬದಲಾದರೇ ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ಮುಖ್ಯಮಂತ್ರಿ ಮಾಡಲಿ ಎಂದು ಒತ್ತಾಯಿಸಿದ್ದಾರೆ.

ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಎಲೆಕ್ಷನ್ ಬಳಿಕ ಈಡಿಗ ಸಮುದಾಯದವರೇ ಮುಖ್ಯಮಂತ್ರಿ ಆಗುತ್ತಾರೆ ಎಂದು ಭವಿಷ್ಯ ನುಡಿದರು.

kota shrinivas pujari next cm karnataka  saaksha tv

ಇದೇ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿದ ಪ್ರಣವಾನಂದ ಸ್ವಾಮೀಜಿ, ಬಿಜೆಪಿ ಹಿಂದುತ್ವವಾದಿ ಎಂದು ಹೇಳಿ ಜಾತಿ ಜಾತಿಗಳ ನಡುವೆ ಜಗಳ ಹುಟ್ಟುಹಾಕಲು ಹೊರಟಿದೆ ಎಂದು ಆರೋಪಿಸಿದರು.

ಇನ್ನು ಚಿಕ್ಕ ಚಿಕ್ಕ ಸಮುದಾಯಗಳಿಗೆ ಮಂಡಳಿ ಘೋಷಿಸುವ ಬಿಜೆಪಿ ಸರ್ಕಾರ ದೊಡ್ಡ ಸಮಾಜವಾದ ಆರ್ಯ ಈಡಿಗರ ಸಮುದಾಯಕ್ಕೆ ನಿಗಮ ಮಂಡಳಿಯನ್ನು ಘೋಷಣೆ ಮಾಡದೇ ಅನ್ಯಾಯ ಮಾಡಿದೆ.

ಕೂಡಲೇ ಆರ್ಯ ಈಡಿಗ ಸಮಾಜಕ್ಕೆ ನಿಗಮ ಮಂಡಳಿ ಘೋಷಣೆ ಮಾಡಿ, 500 ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd