ಮತ್ತೆ ನಾವೇ ಅಧಿಕಾರಕ್ಕೆ ಬರ್ತೀವಿ : ಶ್ರೀನಿವಾಸ ಪೂಜಾರಿ
ಉಡುಪಿ : ನಮ್ಮದು ಜನಾರ್ಶಿರ್ವಾದವಿರುವ ಸರ್ಕಾರವಾಗಿದೆ. ಜನರ ಮಧ್ಯೆ ನಿಂತು ಸಮಸ್ಯೆ ಬಗೆಹರಿಸುತ್ತೇವೆ. ಇನ್ನೊಮ್ಮೆ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜನಾಶೀರ್ವಾದ ಯಾತ್ರೆ, ಜನದೋಹ್ರ ಯಾತ್ರೆ ಎಂಬ ಕಾಂಗ್ರೆಸ್ ಮುಖಂಡ ಉಗ್ರಪ್ಪ ಟೀಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಕೋಟಾ ಶ್ರೀನಿವಾಸ ಪೂಜಾರಿ, ಉಗ್ರಪ್ಪನವರು ಅವರ ರೀತಿಯಲ್ಲಿ ವಿಮರ್ಶೆ ಮಾಡಿದ್ದಾರೆ.
ಕೆಲ ಮುಖಂಡರು ಕಾಲಕಾಲಕ್ಕೆ ಸರ್ಟಿಫಿಕೇಟು ಕೊಡುತ್ತಾರೆ. ಎಲ್ಲರ ಭಾವನೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ನಮ್ಮದು ಜನಾಶೀರ್ವಾದ ಇರುವ ಸರ್ಕಾರ.
ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಜನಾಶೀರ್ವಾದದ ಸರ್ಕಾರ ನೀಡುತ್ತಿದ್ದಾರೆ. ಜನರ ಮಧ್ಯೆ ನಿಂತು ಸಮಸ್ಯೆ ಬಗೆಹರಿಸುತ್ತೇವೆ. ಇನ್ನೊಮ್ಮೆ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ತಾಲಿಬಾನ್ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಕೋಟಾ ಶ್ರೀನಿವಾಸ ಪೂಜಾರಿ, ಅಫ್ಘಾನಿಸ್ತಾನ ದೇಶದ ಬೆಳವಣಿಗೆಯಿಂದಾದರೂ ತಾಲಿಬಾನ್ ಸಂಸ್ಕøತಿಯನ್ನು ಬೆಂಬಲಿಸುವ ಕಾಂಗ್ರೆಸ್ ತನ್ನ ಅಭಿಪ್ರಾಯವನ್ನು ಬದಲಾವಣೆ ಮಾಡಿಕೊಳ್ಳಬೇಕು.
ಆಗಾಗ ತಾಲಿಬಾನ್ ಮೇಲೆ ಇವರಿಗೆ ಒಳ್ಳೆಯ ಭಾವನೆ ಬರುತ್ತದೆ. ಅಲ್ಲಿಯ ದುರಂತವನ್ನು ನೋಡಿಯಾದರೂ ಈ ಸಂಸ್ಕೃತಿಯನ್ನು ಬೆಂಬಲಿಸಬೇಡಿ ಎಂದರು.









