ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಕೋಟಿಗೊಬ್ಬ-3 ಚಿತ್ರ ಟೀಸರ್ ಬಿಡುಗಡೆಯಾಗಿದೆ. ಬಿಡುಗಡೆಗೊಂಡ ಕೆಲವೇ ಗಂಟೆಗಳಲ್ಲಿ ಸಕತ್ ವೈರಲ್ ಆಗಿದೆ.
ತಮಿಳಿನ ಖ್ಯಾತ ನಿರ್ದೇಶಕ ಶಿವಕಾರ್ತಿಕ್ ಆಕ್ಷ್ಯನ್ ಕಟ್ ಹೇಳಿರುವ ಕೋಟಿಗೊಬ್ಬ-3 ಚಿತ್ರಕ್ಕೆ ಸೂರಪ್ಪ ಬಾಬು ಬಂಡವಾಳ ಹೂಡಿದ್ದಾರೆ. ಚಿತ್ರದಲ್ಲಿ ಕಿಚ್ಚನ ಜತೆ ಮಡೋನಾ ಸೆಬಾಸ್ಟೀನ್ ಹೆಜ್ಜೆ ಹಾಕಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಕಂಪೋಸ್ ಮಾಡಿದ್ರೆ, ಶೇಖರ್ ಚಂದ್ರ ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದಾರೆ. ಹಾಗೇ ಕನಲ್ ಕಣ್ಣನ್ ಹಾಗೂ ವಿಜಯ, ಅಲ್ ಅರಸ್ ಸಾಹಸ ನಿರ್ದೇಶನ ಮಾಡಿದ್ದಾರೆ.
ಚಿತ್ರದಲ್ಲಿ ಸುದೀಪ್ ಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಅಭಿಮಾನಿಗಳ ಕುತೂಹಲವನ್ನ ಹೆಚ್ಚಿಸಿದ್ದಾರೆ. ಟೀಸರ್ ಅದ್ಭುತವಾಗಿ ಮೂಡಿಬಂದಿದ್ದು ಸಿನಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ, ಇನ್ನು, ಆಕ್ಷನ್, ಅಡ್ವೆಂಚರ್ ಡ್ರಾಮಾ ಕಥಾಹಂದರದ ಕೋಟಿಗೊಬ್ಬ ಸೀಕ್ಷೆಲ್ ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.








