ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿದಿದ್ದು, ಈವರೆಗೆ ಹೆಮ್ಮಾರಿ ಸೋಂಕಿಗೆ ಬಲಿಯಾದವರ ಸಂಖ್ಯೆ 18 ಸಾವಿರ ಗಡಿ ದಾಟಿದೆ.
ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಕಳೆದ 24 ಗಂಟೆಗಳಲ್ಲಿ ಈವರೆಗೆ ಅತಿ ಹೆಚ್ಚು ಪ್ರಕರಣಗಳು ಎಂಬಂತೆ ಬರೋಬ್ಬರಿ 20,903 ಸೋಂಕಿತರು ಪತ್ತೆಯಾಗಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 6,25,544 ತಲುಪಿದೆ. ಈ ಮೂಲಕ ಭಾರತ ಕೊರೊನಾ ಪೀಡಿತ ದೇಶಗಳ ಸಾಲಿನಲ್ಲಿ ಮೂರನೇ ಸ್ಥಾನದತ್ತ ಸಾಗಿದೆ.
ಇದೇ ಅವಧಿಯಲ್ಲಿ ಮಹಾಮಾರಿ ಸೋಂಕಿಗೆ 379 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿಗೆ 18,213 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಪೈಕಿ ಶೇ.60 ರಷ್ಟು ಅಂದರೆ 3,79,892 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 2,27,439 ಕೇಸ್ ಗಳು ಸಕ್ರಿಯವಾಗಿವೆ.
ಜಾಗತಿಕವಾಗಿ ಕೊರೊನಾ ಪೀಡಿತ ದೇಶಗಳಲ್ಲಿ ಸದ್ಯ ಭಾರತ ನಾಲ್ಕನೇ ಸ್ಥಾನದಲ್ಲಿದೆ. ಈವರೆಗೂ ದೇಶದಲ್ಲಿ 6 ಲಕ್ಷದ 25 ಸಾವಿರ ಮಂದಿಯಲ್ಲಿ ಸೋಂಕು ದೃಢವಾಗಿದೆ. 6 ಲಕ್ಷದ 61 ಸಾವಿರ ಕೇಸ್ ಹೊಂದಿರುವ ರಷ್ಯಾ ಮೂರನೇ ಸ್ಥಾನದಲ್ಲಿದೆ.








