ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಜ್ವರ ಹಾಗೂ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಅವರು ಕೋವಿಡ್ ತಪಾಸಣೆ ಮಾಡಿಸಿದ್ದರು. ಇಂದು ಅವರ ಕೋವಿಡ್ ಟೆಸ್ಟ್ ವರದಿ ಬಂದಿದ್ದು, ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಪಾಲಿಕೆ ಆಯುಕ್ತರ ಆರೋಗ್ಯದ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಮಾಡಲಾಗಿದೆ.








