ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕ ಬಂದ್ ವಿಚಾರವಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನ ಕರ್ನಾಟಕ ಬಂದ್ ಗೆ ಕಾಂಗ್ರೆಸ್ ಬೆಂಬಲ ನೀಡಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಹಕ್ಕನ್ನು ಕಿತ್ತುಕೊಳ್ಳುವ ಪ್ರಯತ್ನ ಇದು. ನಾವೂ ಕೂಡ ಪ್ರತಿಭಟನೆ ಮಾಡುತ್ತಿದ್ದೇವೆ.
ಇಡೀ ಪ್ರತಿಭಟನೆಯನ್ನು ಸರ್ಕಾರ ಹತ್ತಿಕ್ಕುತ್ತಿದೆ. ಬಂಡವಾಳಶಾಹಿಗಳಿಗೆ ಅನುಕೂಲಕ್ಕಾಗಿ ಈ ಮಸೂದೆಯನ್ನು ತರಲಾಗುತ್ತಿದೆ.
ಇದನ್ನೂ ಓದಿ : ಕಾಂಗ್ರೆಸ್ ಹಿರಿಯ ನಾಯಕ ಹೆಚ್.ಕೆ.ಪಾಟೀಲ್ ಗೆ ಕೊರೊನಾ ದೃಢ
ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸಿಎಂ ಬಿ.ಎಸ್. ಯಡಿಯೂರಪ್ಪ ಯಾರದೋ ಕೈಗೊಂಬೆಯಾಗಿ ಕೆಲಸ ಮಾಡ್ತಾ ಇದ್ದಾರೆ.
ಅವರ ಒಳಗಿನ ಸಮಸ್ಯೆ ಏನಿದೆಯೋ? ಮಸೂದೆ ವಿರುದ್ಧ ಮುಂದಿನ ದಿನಗಳಲ್ಲಿ ಚರ್ಚೆ ಮಾಡಿ ಮತ್ತಷ್ಟು ಹೋರಾಟ ಮಾಡಲಿದ್ದೇವೆ ಎಂದು ಎಚ್ಚರಿಕೆ ನೀಡಿದರು.
ಭೂ ಸುಧಾರಣೆ, ಎಂಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಇಂದು ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ಕೊಟ್ಟಿವೆ. ಈ ಬಂದ್ ಗೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.