ಭೂಮಿ ಹೋದ್ರೂ ಪರ್ವಾಗಿಲ್ಲ ಮೇಕೆದಾಟು ಯೋಜನೆ ಆರಂಭಿಸಿ d k shivakumar saaksha tv
ಮಡಿಕೇರಿ : ನಮ್ಮ ಭೂಮಿ ಹೋದರೂ ಪರವಾಗಿಲ್ಲ ಆದಷ್ಟು ಬೇಗ ಮೇಕೆದಾಟು ಯೋಜನೆ ಆರಂಭವಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.
ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಮುಂದಿನ ವರ್ಷ ಜನವರಿಯಲ್ಲಿ ಪಾದಯಾತ್ರೆ ಆರಂಭಿಸಲಿದೆ. ಈ ಹಿನ್ನೆಲೆಯಲ್ಲಿ ಇಂದು ಕೊಡಗಿನ ತಲಕಾವೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪೂಜೆ ಸಲ್ಲಿಸಿದ್ದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಯಿಂದ ಬೆಂಗಳೂರಿನ ಒಂದೂವರೆ ಕೋಟಿ ಜನರಿಗೆ ಎಲ್ಲ ಕಾಲದಲ್ಲೂ ಕುಡಿಯುವ ನೀರಿನ ವ್ಯವಸ್ಥೆ ಆಗಲಿದೆ. ಜೊತೆಗೆ 7 ಜಿಲ್ಲೆಗಳಿಗೆ ಅನುಕೂಲವಾಗಲಿದೆ. ಆದ್ದರಿಂದ ಮೇಕೆದಾಟು ಯೋಜನೆಯನ್ನು ಆದಷ್ಟು ಬೇಗ ಮಾಡಬೇಕು ಎಂದು ಒತ್ತಾಯಿಸಿದರು.
ಇನ್ನು ಯೋಜನೆ ಶೀಘ್ರ ಜಾರಿಗೆ ಆಗ್ರಹಿಸಿ, ಮೇಕೆದಾಟಿನಿಂದ ಬೆಂಗಳೂರುವರೆಗೆ ಪಾದಯಾತ್ರೆ ನಡೆಸಲಿದ್ದೇವೆ. ಇದು ಪಕ್ಷಾತೀತವಾಗಿ ನಡೆಯುತ್ತಿರುವ ಹೋರಾಟ. ಇದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.








