ನೋಡ್ರಪ್ಪಾ ನನಗಿರೋದು ಒಬ್ಬಳೇ ಹೆಂಡತಿ, ಒಂದೇ ಸಂಸಾರ : ಡಿಕೆಶಿ
ಬೆಂಗಳೂರು : ನೋಡ್ರಪ್ಪಾ ನನಗಿರೋದು ಒಬ್ಬಳೇ ಹೆಂಡತಿ, ಒಂದೇ ಸಂಸಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಟಾಂಗ್ ನೀಡಿದ್ದಾರೆ.
ಇಂದು ಬೆಳಗ್ಗೆ ಸಚಿವ ಡಾ.ಕೆ.ಸುಧಾಕರ್, ಸಿದ್ದರಾಮಯ್ಯ, ಕುಮಾರಸ್ವಾಮಿ, ಮುನಿಯಪ್ಪ, ಡಿ.ಕೆ.ಶಿವಕುಮಾರ್ ಮತ್ತು ನನ್ನನ್ನು ಸೇರಿದಂತೆ ಎಲ್ಲ 224 ಶಾಸಕರ ವೈಯಕ್ತಿಕ ಜೀವನದ ಬಗ್ಗೆ ತನಿಖೆ ಆಗಲಿ.
ಯಾರಿಗೆ ಅನೈತಿಕ ಸಂಬಂಧ ಇದೆ, ವಿವಾಹವೇತರ ಸಂಬಂಧ ಇದೆ ಎಂಬುವುದು ಗೊತ್ತಾಗಲಿ. ಸಿಎಂ ಆಗಿದ್ದಾಗ ಯಾರು ಏನು ಮಾಡಿದ್ರು ಅನ್ನೋದು ಗೊತ್ತಾಗಲಿ.
ಸಿದ್ದರಾಮಯ್ಯ, ಕುಮಾರಸ್ವಾಮಿ, ಮುನಿಯಪ್ಪ, ಡಿ.ಕೆ.ಶಿವಕುಮಾರ್ ಏನು ಏಕಪತ್ನಿವ್ರತಸ್ಥರಾ ಎಂದು ಪ್ರಶ್ನಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರೊಂದಿಗೆ ಮಾತನಾಡುತ್ತಾ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸುಧಾಕರ್ ಹೇಳಿದ್ದು ಬಹಳ ಸಂತೋಷ.
ಆ ಕುರಿತಂತೆ ತನಿಖೆ ಆಗಲಿ, ಇಲ್ಲಿ ಮಾತನಾಡೋದಲ್ಲ. ಸದನದಲ್ಲೂ ಮಾತನಾಡುತ್ತೇನೆ.
ಆ ಕುರಿತಂತೆ ನಮ್ಮ ನಾಯಕರೊಂದಿಗೆ ಚರ್ಚಿಸುತ್ತೇನೆ. ನೋಡ್ರಪ್ಪಾ ನನಗಿರೋದು ಒಬ್ಬಳೇ ಹೆಂಡತಿ, ಒಂದೇ ಸಂಸಾರ ಎಂದು ಹೇಳಿದರು.