ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯ ಸಂದರ್ಭದಲ್ಲಿ ಕಲಾವಿದರತ್ತ 500 ರೂ. ಗಳ ನೋಟುಗಳನ್ನು ಎಸೆದಿರುವ ಆರೋಪದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾರ್ಚ್ 28ರಂದು ಶ್ರೀರಂಗಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ನಡೆದಿತ್ತು. ಮಂಡ್ಯ ತಾಲೂಕಿನ ಕ್ಯಾತುಂಗೆರೆಯಿಂದ ಡಿ.ಕೆ. ಶಿವಕುಮಾರ್ ರೋಡ್ ಶೋ ಆರಂಭಿಸಿದ್ದರು. ಈ ಸಂದರ್ಭದಲ್ಲಿ ಅವರು ವಾಹನದ ಮೇಲಿಂದ ಕಲಾವಿದರತ್ತ 500 ನೋಟುಗಳ ಹಣದ ಕಟ್ಟು ಎಸೆದಿದ್ದರು. ಹಣ ಎಸೆಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಈ ಕುರಿತು ಚುನಾವಣಾ ಸೆಕ್ಟರ್ ಅದಿಕಾರಿ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸುವಂತೆ ನ್ಯಾಯಾಲಯ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಏ. 2ರಂದು ಗ್ರಾಮಾಂತರ ಠಾಣೆ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.







