ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಅಖಂಡ ಶ್ರೀನಿವಾಸ್ ಮೂರ್ತಿ ಅವರು ಸಬಿಐ ತನಿಖೆಗೆ ಆಗ್ರಹಿಸಿದ್ದು, ಈ ವಿಚಾರವಾಗಿ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅವರ ಹೇಳಿಕೆಯ ಬಗ್ಗೆ ಇನ್ನೂ ನನಗೆ ಗೊತ್ತಿಲ್ಲ, ನಮ್ಮಪಕ್ಷದ ಸ್ಟಾಂಡ್ ಏನು ಅನ್ನೋದನ್ನ ಹೇಳಿದ್ದೇವೆ. ಎಲ್ಲರೂ ಕುಳಿತು ಮಾತನಾಡುತ್ತೇವೆ ಎಂದಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಸಂಬಂಧಿ ನವೀನ್ ಕುಮಾರ್ ಹಾಕಿದ್ದ ಫೇಸ್ ಬುಕ್ ಪೋಸ್ಟ್ ಸದ್ಯ ದೊಡ್ಡ ಹಿಂಸಾಚಾರಕ್ಕೆ ಕಾರಣವಾಗಿತ್ತು. ಗಲಭೆಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕಾಗಿ ಪೊಲೀಸರು ಗೋಲಿಬಾರ್ ನಡೆಸಿದ್ದರು. ಈ ವೇಳೆ ಪೊಲೀಸರ ಗುಂಡಿಗೆ ಮೂವರು ಬಲಿಯಾಗಿದ್ದರು.
ರಾಜ್ಯದಲ್ಲೂ ಡಿಜಿಟಲ್ ಜಾಹೀರಾತು ನೀತಿ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ
ರಾಜ್ಯ ಸರ್ಕಾರವೂ ಇದೀಗ ಡಿಜಿಟಲ್ ಮಾಧ್ಯಮಗಳಿಗೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಪಾರದರ್ಶಕ ಜಾಹೀರಾತು ನೀತಿಯನ್ನು ಜಾರಿಗೆ ತಂದಿದೆ. ಡಿಜಿಟಲ್ ಜಾಹೀರಾತು ಮಾರ್ಗಸೂಚಿ–2024 ಅನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ...








