ನಟ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ಧಿಡೀರ್ ಭೇಟಿ ಕೊಟ್ಟ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ !
ಬೆಂಗಳೂರು, ಜುಲೈ 10: ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಡಿಕೆ ಶಿವಕುಮಾರ್ ನಿನ್ನೆ ಕನ್ನಡ ಚಿತ್ರರಂಗದ ಪ್ರಸಿದ್ಧ ನಾಯಕನಟ ಡಾ. ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಒಂದು ತಾಸಿಗೂ ಅಧಿಕ ಕಾಲ ಮಾತುಕತೆ ನಡೆಸಿದ್ದಾರೆ.

ಡಿಕೆ ಶಿವಕುಮಾರ್ ಅವರು ಡಾ. ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ ಫೋಟೋಗಳನ್ನು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಮಾನ್ಯತಾ ಟೆಕ್ ಪಾರ್ಕ್ ನಲ್ಲಿರುವ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ ನೀಡಿದ ವೇಳೆ ಪತ್ನಿ ಗೀತಾ ಶಿವರಾಜ್ ಕುಮಾರ್ ಮತ್ತು ನಿರ್ಮಾಪಕರಾದ ಶ್ರೀಕಾಂತ್
ಹಾಜರಿದ್ದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್, ಮಾನ್ಯತಾ ಟೆಕ್ ಪಾರ್ಕ್ ಬಳಿ ಗೆಳೆಯರ ಮದುವೆ ಕಾರ್ಯಕ್ರಮ ಇತ್ತು. ಕಾರ್ಯಕ್ರಮ ಮುಗಿಸಿ ಹಿಂದಿರುಗುವ ಸಮಯದಲ್ಲಿ ನಟ ಶಿವರಾಜ್ ಕುಮಾರ್ ಅವರ ನಿವಾಸದ ಎದುರು ಕ್ರಿಕೆಟ್ ಆಡುತ್ತಾ ಇರುವುದು ಕಾಣಿಸಿತು. ಹಾಗಾಗಿ ಸೌಹಾರ್ದಯುತವಾಗಿ ನಾನು ಅವರ ನಿವಾಸಕ್ಕೆ ತೆರಳಿ ಉಭಯಕುಶಲೋಪರಿ ನಡೆಸಿದ್ದೇನೆ ಎಂದು ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.








