`ಸಾಹುಕಾರ್’ ಸವಾಲ್ ಬೆನ್ನಲ್ಲೆ ಬೆಳಗಾವಿಯತ್ತ `ಟ್ರಬಲ್ ಶೂಟರ್’
ಬೆಂಗಳೂರು : ಸಿಡಿ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಹೆಸರು ಕೇಳಿಬರುತ್ತಿದ್ದಂತೆ ಟ್ರಬಲ್ ಶೂಟರ್ ವಿರುದ್ಧ ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಕಿಡಿಕಾರಿದ್ದರು.
ಕನಕಪುರದಲ್ಲಿ ನನ್ನ ತಾಕತ್ತೇನು ಅಂತಾ ತೋರಿಸ್ತೀನಿ ಎಂದು ಬಂಡೆಗೆ ಸವಾಲ್ ಹಾಕಿದ್ದರು. ಇದರ ಬೆನ್ನಲ್ಲೆ ಕನಕಪುರ ಬಂಟೆ ಡಿ.ಕೆ. ಶಿವಕುಮಾರ್ ಬೆಳಗಾವಿ ಪ್ರವಾಸ ಕೈಗೊಂಡಿದ್ದಾರೆ.
ಇಂದು ಮಧ್ಯಾಹ್ನ ಶಿವಕುಮಾರ್ ಬೆಳಗಾವಿಯತ್ತ ಪ್ರಯಣ ಬೆಳೆಸಲಿದ್ದು, ಏಳು ಗಂಟೆಗೆ ನಡೆಯುವ ಹಿರಿಯ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಬೆಳಗಾವಿ ಲೋಕಸಭಾ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ನಾಳೆ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಈ ಸಂದರ್ಭ ಹಿರಿಯ ಕಾಂಗ್ರೆಸ್ ನಾಯಕರ ಜೊತೆ ಡಿ.ಕೆ.ಶಿವಕುಮಾರ್ ಭಾಗಿಯಾಗಲಿದ್ದಾರೆ.
ಇಂದು ಸಂಜೆ 7ಕ್ಕೆ ಬೆಳಗಾವಿಯಲ್ಲಿ ನಡೆಯುವ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ.
ಸಭೆಯಲ್ಲಿ ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್, ಉಸ್ತುವಾರಿ ಎಂ.ಬಿ. ಪಾಟೀಲ ಸೇರಿದಂತೆ ಕಾಂಗ್ರೆಸ್ಸಿನ ಹಿರಿಯ ನಾಯಕರು ಸಭೆಯಲ್ಲಿ ಇರಲಿದ್ದಾರೆ.
