Satish jarkiholi | “ಬಿಜೆಪಿಯಿಂದ ಹಲಾಲ್ ಆದ ವ್ಯಕ್ತಿ ಈಶ್ವರಪ್ಪ”
ಬೆಳಗಾವಿ : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಎಸ್.ಈಶ್ವರಪ್ಪ ಬಿಜೆಪಿಯಿಂದ ಮೊಟ್ಟ ಮೊದಲು ಹಲಾಲ್ ಆದ ವ್ಯಕ್ತಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದ್ದಾರೆ.
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಎಸ್ ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲಾದ ಹಿನ್ನೆಲೆಯಲ್ಲಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಬಿಜೆಪಿಯಿಂದ ಹಲಾಲ್‍ಗೆ ಮೊದಲು ಬಲಿಯಾಗಿದ್ದು ಈಶ್ವರಪ್ಪ ಎಂದು ವ್ಯಂಗ್ಯವಾಡಿದರು.
ಅಲ್ಲದೇ ಹಲಾಲ್ ಆಗಲು ಇನ್ನು ಬಹಳಷ್ಟು ಜನರ ಸರದಿ ಬರಲಿದೆ. ಕೋವಿಡ್ ಸಂದರ್ಭದಲ್ಲಿ ಸಾವಿರಾರು ಕೋಟಿ ಭ್ರಷ್ಟಾಚಾರ ಆಗಿದೆ ಎಂದು ಆರೋಪಿಸಿದರು.
ಅಲ್ಲದೇ ಇನ್ನು ಅನೇಕ ಸಚಿವರು ಭ್ರಷ್ಟಾಚಾರಕ್ಕೆ ಬಲಿ ಆಗಲಿದ್ದಾರೆ ಎಂದ ಸತೀಶ್ ಜಾರಕಿಹೊಳಿ, ರಾಜ್ಯ ಸರ್ಕಾರದಲ್ಲಿ ಶೇ.40 ಕಮಿಷನ್ ಇದೆ ಎಂದು ಆರೋಪಿಸಿದರು.
ಇನ್ನ ಈಶ್ವರಪ್ಪ ರಾಜೀನಾಮೆ ಬಗ್ಗೆ ಮಾತನಾಡಿ, ಕೇವಲ ರಾಜೀನಾಮೆ ಅಲ್ಲ, ಈಶ್ವರಪ್ಪ ಬಂಧನ ಆಗೋವರೆಗೂ ಹೋರಾಟ ಮುಂದುವರಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.
KPCC satish-jarkiholi-said-eshwarappa-is-the-first-person-to-be-halal-by-the-bjp









