ದೇಶ ಪ್ರೇಮಕ್ಕೂ ಬಿಜೆಪಿಗೂ ಎಲ್ಲಿಂದ ಎಲ್ಲಿಯ ಸಂಬಂಧ : ಸಿದ್ದರಾಮಯ್ಯ ( Siddaramaiah )
ಬೆಂಗಳೂರು : ಮಹಾತ್ಮ ಗಾಂಧಿಯನ್ನು ಕೊಂದ ಗೋಡ್ಸೆ ವಂಶಸ್ಥರು ಇಂದು ದೇಶ ಪ್ರೇಮದ ಬಗ್ಗೆ ಮಾತನಾಡುತ್ತಿದ್ದಾರೆ. ದೇಶ ಪ್ರೇಮಕ್ಕೂ ಬಿಜೆಪಿಗೂ ಎಲ್ಲಿಂದ ಎಲ್ಲಿಯ ಸಂಬಂಧ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಗರದ ಕೆಪಿಸಿಸಿ ( KPCC ) ಕಚೇರಿಯಲ್ಲಿಂದು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆ, ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸಿಗರು ಸ್ವತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ಇಂದಿರಾಗಾಂಧಿ ದೇಶದ ಐಕ್ಯತೆಗಾಗಿಯೇ ಜೀವ ಕಳೆದುಕೊಂಡರು.
ದೇಶಕ್ಕೆ ಬಿಜೆಪಿಯಲ್ಲಿ ಒಬ್ಬರೂ ಸತ್ತಿಲ್ಲ. ಮಹಾತ್ಮ ಗಾಂಧಿಯನ್ನು ಕೊಂದ ಗೋಡ್ಸೆ ವಂಶಸ್ಥರು ಇಂದು ದೇಶ ಪ್ರೇಮದ ಬಗ್ಗೆ ಮಾತನಾಡುತ್ತಿದ್ದಾರೆ. ದೇಶ ಪ್ರೇಮಕ್ಕೂ ಬಿಜೆಪಿಗೂ ಎಲ್ಲಿಂದ ಎಲ್ಲಿಯ ಸಂಬಂಧ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಖಾಲಿಸ್ತಾನ್ ಹೋರಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳದೆ ಇದ್ದಿದ್ದರೆ ಇಂದಿರಾಗಾಂಧಿ ಅವರ ಹತ್ಯೆಯಾಗುತ್ತಿರಲಿಲ್ಲ. ಬಿಜೆಪಿಯವರು ಮಹಾತ್ಮಗಾಂಧೀಜಿಯವರನ್ನು ಕೊಂದ ಗೋಡ್ಸೆಯನ್ನು ಆರಾಧಿಸುತ್ತಾರೆ.
ಇದನ್ನೂ ಓದಿ : ರಾರಾ ಕ್ಷೇತ್ರದಲ್ಲಿ ಸಿಎಂ ರೋಡ್ ಶೋ : ದಡ್ಡು ಮುಟ್ಟಿಲ್ಲ, ಆಣೆ ಮಾಡ್ತೀನಿ ಎಂದ ಮುನಿರತ್ನ
ಮತ್ತೊಂದು ಕಡೆ ತಾವು ದೇಶಪ್ರೇಮಿಗಳು ಎಂದು ಹೇಳಿಕೊಳ್ಳುತ್ತಾರೆ. ಇದು ಇಮಾಮ್ ಸಾಬಿ ಮತ್ತು ಗೋಕುಲಾಷ್ಠಮಿಗೆ ಇರುವಂತಹ ಸಂಬಂಧ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದರು.
ಮುಂದುವರಿದು ನೆಹರು ಮತ್ತು ಸರ್ದಾರ್ ಬಗ್ಗೆ ಕೆಲ ಭಿನ್ನಾಬಿಪ್ರಾಯದ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ನೆಹರು ಮತ್ತು ಸರ್ದಾರ್ ವಲ್ಲಭ ಬಾಯಿ ಪಟೇಲ್ ಅವರ ನಡುವೆ ಉತ್ತಮ ಹೊಂದಾಣಿಕೆಯಿತ್ತು.
ಆದರೆ ಬಿಜೆಪಿಯವರು ಸುಳ್ಳು ಸುದ್ದಿ ಹಬ್ಬಿಸಿ ಇತಿಹಾಸ ತಿರುಚುವ ಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಬಳಿಕ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಮಾತನಾಡಿ, ಇಂದಿರಾಗಾಂಧಿ ಮತ್ತು ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ಸಾಧನೆಗಳನ್ನು ಮೆಲುಕು ಹಾಕಿದರು.
ಇಂದಿರಾಗಾಂಧಿ ಅವರು ಬ್ಯಾಂಕ್ ರಾಷ್ಟ್ರೀಕರಣ ಮಾಡಿದರು, ಗರೀಬಿ ಹಠಾವೋ ಜಾರಿಗೆ ತಂದರು, ಬಡವರ ಪರವಾಗಿ 20 ಅಂಶಗಳ ಕಾರ್ಯಕ್ರಮ ಘೋಷಣೆ ಮಾಡಿದಾಗ ಕೆಲವರು ವಿರೋಧ ಮಾಡಿದರು. ಆ ಕಾರಣಕ್ಕಾಗಿಯೇ ಕಾಂಗ್ರೆಸ್ ವಿಭಜನೆಯಾಯಿತು ಎಂದು ಹೇಳಿದರು.
ಇದನ್ನೂ ಓದಿ : ಕಾರ್ಯಕರ್ತರಿಗಾಗಿ ಚಾಯ್ ವಾಲಾ ಆದ ಜಮೀರ್
ಇನ್ನು ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಸೇರಿದಂತೆ ಮತ್ತಿತ್ತರ ಕಾಂಗ್ರೆಸ್ ನಾಯಕರು ಉಪಸ್ಥಿತರಿಸಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel