ನಾಳೆ ನಡೆಯಬೇಕಿದ್ದ ಕೆಪಿಎಸ್ ಸಿ ಎಕ್ಸಾಂ ಮುಂದೂಡಿಕೆ
ಬೆಂಗಳೂರು : ಕೊರೊನಾ ಸೋಂಕು ಹಿನ್ನೆಲೆಯಲ್ಲಿ ನಾಳೆಯಿಂದ ನಡೆಯಬೇಕಿದ್ದ ಕೆ ಪಿ ಎಸ್ ಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಆಯೋಗ ತಿಳಿಸಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಆಯೋಗ, ಏಪ್ರಿಲ್ 22ರಿಂದ ಏಪ್ರಿಲ್ 30ರವರೆಗೆ ನಿಗದಿಯಾಗಿದ್ದ 2020ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖೆ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ನೈಟ್ ಕಫ್ರ್ಯೂ ಹಾಗೂ ವಿಕೇಂಡ್ ಕಫ್ರ್ಯೂ ಜಾರಿಗೆ ಮಾಡಿದೆ.
ಸರ್ಕಾರದ ಮಾರ್ಗಸೂಚಿ ಅನ್ವಯ ಕೆಪಿಎಸ್ ಸಿ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ನಂತರದ ದಿನಗಳಲ್ಲಿ ಪ್ರಕಟಿಸುವುದಾಗಿ ತಿಳಿಸಿದೆ.










