ಕರ್ನಾಟಕ ಲೋಕಸೇವಾ ಆಯೋಗವು 188 ಹುದ್ದೆಗಳಿಗೆ ಅರ್ಜಿ ಆಹ್ವಾನ Saaksha Tv
KPSC Requirement 2022: ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಯಲ್ಲಿ ಕಾಲಿ ಇರುವ 188 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಗ್ರೂಪ್ ಬಿ ವೃಂದದ ಸಹಾಯಕ ಇಂಜಿನಿಯರ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಈ ಹುದ್ದೆಗಳಿಗೆ ಬಿಇ ಪದವೀಧರರು ಆನ್ಲೈನ್ ಮೂಲಕ ಅರ್ಜಿ ಹಾಕಬಹುದು.
ನೇಮಕಾತಿ ಆಯೋಗ : ಕರ್ನಾಟಕ ಲೋಕಸೇವಾ ಆಯೋಗ
ಉದ್ಯೋಗ ಇಲಾಖೆ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ
ಹುದ್ದೆ ಹೆಸರು : ಸಹಾಯಕ ಅಭಿಯಂತರರು ಗ್ರೇಡ್-1
ಹುದ್ದೆಗಳ ಸಂಖ್ಯೆ: 188 (129 NHK + 59 HK)
ನೇಮಕಾತಿ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನ
ಪ್ರಮುಖ ದಿನಾಂಕಗಳು
ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28-02-2022
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 30-03-2022 ರ ರಾತ್ರಿ 11-45 ರವರೆಗೆ.
ಶುಲ್ಕವನ್ನು ಪಾವತಿಸಲು ಕೊನೆ ದಿನಾಂಕ: 31-03-2022
ಅರ್ಜಿ ಶುಲ್ಕ ವಿವರ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : Rs.600.
EWS, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ : Rs.300.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ : Rs.50.
ಎಸ್ಸಿ / ಎಸ್ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ ಇದೆ.
ವಿದ್ಯಾರ್ಹತೆ
ಕರ್ನಾಟಕ ರಾಜ್ಯ ಸರ್ಕಾರದಿಂದ ಗುರುತಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಬಿಇ ಇನ್ ಸಿವಿಲ್ / ಪರಿಸರ ವಿಷಯದಲ್ಲಿ ಪದವಿ ಪಡೆದಿರಬೇಕು.
ವೇತನ
43000 ರಿಂದ 83900ವರೆಗೆ
ವಯೋಮಿತಿ ಅರ್ಹತೆಗಳು
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯೋಮಿತಿ ಅರ್ಹತೆ ಕೆಳಗಿನಂತಿದೆ.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 35 ವರ್ಷ.
EWS, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ : 38 ವರ್ಷ.
ಎಸ್ಸಿ / ಎಸ್ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ : 40 ವರ್ಷ.








