KPTCL ನಲ್ಲಿ 1878 ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL)ನಲ್ಲಿ 1899 ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಪ್ರಕ್ರಿಯೆ ಆರಂಭವಾಗಿದೆ. ಈ ನೇಮಕಾತಿಯ ಪ್ರಾರಂಭಿಕ ಹಂತವಾಗಿ 21 ಜನರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಗಿದೆ ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.
ಇನ್ನೂ ಕೆಪಿಟಿಸಿಎಲ್ ಹುದ್ದೆಗೆ 2019ರಲ್ಲೇ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಸಾಧ್ಯವಾಗಿರಲಿಲ್ಲ. ಇದೀಗ ನೆನೆಗುದಿಗೆ ಬಿದ್ದಿದ್ದ ನೇಮಕಾತಿ ಪ್ರಕ್ರಿಯೆ ಮತ್ತೆ ಶುರುವಾಗಿದ್ದು, ಉದ್ಯೋಗ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಂತಾಗಿದೆ. ಈಗಾಗಲೇ 21 ಮಂದಿ ಕಿರಿಯ ಪವರ್ ಮ್ಯಾನ್ಗಳಿಗೆ ಸಾಂಕೇತಿಕವಾಗಿ ಆದೇಶ ಪ್ರತಿ ನೀಡಲಾಗಿದೆ. ಉಳಿದ 1878 ಮಂದಿ ಶೀಘ್ರದಲ್ಲೇ ಆದೇಶ ಪ್ರತಿ ನೀಡಲಾಗುತ್ತದೆ.