ಬೆಂಗಳೂರು : ಡಿಜೆ ಹಳ್ಳಿ ಗಲಭೆ ವೇಳೆ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿ ಪರಾರಿಯಾಗಿದ್ದ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.
ತನಿಖಾಕಾಧಿಕಾರಿಗಳು ಆರೋಪಿಗಳನ್ನು ಗೌಪ್ಯಸ್ಥಳದಲ್ಲಿರಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಗಲಭೆ ವಿಚಾರದ ಬಗ್ಗೆ ಮಹತ್ವದ ಮಾಹಿತಿಗಳನ್ನು ಕಲೆ ಹಾಕುವ ಪ್ರಯತ್ನ ನಡೆಸುತ್ತಿದ್ದಾರೆ. ಇನ್ನೂ ಈಗಾಗಲೇ ಡಿಜೆಹಳ್ಳಿ ಮತ್ತು ಕೆಜಿಹಳ್ಳಿಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 360ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಸಿದ್ದಾರೆ. ಇನ್ನೂ ಸಹ ಹಲವರನ್ನು ಬಂಧಿಸುವ ಸಾಧ್ಯತೆಯಿದೆ.