Kranthi : ಕ್ರಾಂತಿ ಪ್ರಚಾರದ ವೇಳೆ ದರ್ಶನ್ ಮೇಲೆ ಚಪ್ಪಲಿ ಎಸೆದ ಕಿಡಿಗೇಡಿ
ಡಿ ಬಾಸ್ ಅವರ ಬಹುನಿರೀಕ್ಷೆಯ ಕ್ರಾಂತಿ ಸಿನಿಮಾದ ಪ್ರಚಾರದ ವೇಲೆ ದರ್ಶನ್ ಮೇಲೆ ಕಿಡಿಗೇಡಿಯೋರ್ವ ಚಪ್ಪಲಿ ಎಸೆದಿರುವಂತಹ ಘಟನೆ ನಡೆದಿದ್ದು ,. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿ ವೈರಲ್ ಆಗ್ತಿದೆ.. ಇದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ..
ಚಾಲೆಂಜಿಂಗ್ ಸ್ಟಾರ್ ದರ್ಶನ್ ಕ್ರಾಂತಿ ಸಿನಿಮಾ ಪ್ರಚಾರಕ್ಕೆಂದು ಹೊಸಪೇಟೆಗೆ ತೆರಳಿದ್ದರು. ವೇದಿಕೆ ಬರುವುದಕ್ಕೂ ಮುನ್ನ ದರ್ಶನ್ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಪುತ್ಥಳಿಗೆ ಹೂ ಮಾಲೆ ಹಾಕಿದ್ದರು. ಆ ಬಳಿಕವೇ ಕ್ರಾಂತಿ ಸಿನಿಮಾದ ಎರಡನೇ ಹಾಡನ್ನು ರಿಲೀಸ್ ಮಾಡುವುದಕ್ಕೆ ವೇದಿಕೆ ಮೇಲೆ ಬಂದಿದ್ದರು. ಈ ವೇಳೆ ಅವರ ಮೇಲೆ ಚಪ್ಪಲಿ ಎಸೆದಿರುವ ಪ್ರಸಂಗ ನಡೆದಿದೆ..
ದರ್ಶನ್ ನೋಡಲು ಅವರ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿತ್ತು. ಈ ವೇಳೆ ನೂಕು ನುಗ್ಗಲು ಏರ್ಪಟ್ಟಿತ್ತು. ವೇದಿಕೆ ಮೇಲೆ ನಿಲ್ಲಲೂ ಅವಕಾಶವಿರದಷ್ಟು ಅಭಿಮಾನಿಗಳು ಸೇರಿದ್ದರು. ಇನ್ನೇನು ರಚಿತಾ ರಾಮ್ ಮಾತಾಡಲು ಮುಂದಾಗಿದ್ದರಷ್ಟೇ. ಅದೇ ವೇಳೆ ದರ್ಶನ್ ಕೂಡ ಮುಂದೆ ಬಂದರು. ಆ ವೇಳೆ ದರ್ಶನ್ ಮೇಲೆ ಚಪ್ಪಲಿ ಬಿದ್ದಿದೆ. ಕಿಡಿಗೇಡಿಗಳ ಈ ಕೃತ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ನೋಡಿ ಅಭಿಮಾನಿಗಳು ಕಿಡಿಕಾರುತ್ತಿದ್ದಾರೆ.